ರಾಮನಗರ, ಆಗಸ್ಟ್, 8,2026 (www.justkannada.in): ಬೆಂಗಳೂರು-ಮೈಸೂರು ದಶಪಥ ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ರಾಮನಗರ ತಾಲೂಕಿನ ಅವರಗೆರೆ ಗೇಟ್ ಬಳಿ ಈ ದುರ್ಘಟನೆ ನಡೆದಿದೆ. ಹೆದ್ದಾರಿಯಲ್ಲಿದ್ದ ಸೈನ್ ಬೋರ್ಡ್ಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದು ಈ ದುರ್ಘಟನೆ ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಬಸ್ ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಬಸ್ನಲ್ಲಿದ್ದ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.
ಕೇರಳದಿಂದ ಬೆಂಗಳೂರಿನ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್, ರಾಮನಗರ ತಾಲೂಕಿನ ಅವರಗೆರೆ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿದ್ದ ಬೃಹತ್ ಸೈನ್ ಬೋರ್ಡ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮವಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಭೀಕರ ಅಪಘಾತದ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಘಟನೆ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: accident, Bengaluru-Mysore, highway






