ಬೆಂಗಳೂರು,ಆಗಸ್ಟ್,10,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಗೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಇತರೆ ಆರೋಪಿಗಳಿಗೆ ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯ ಶಾಕ್ ನೀಡಿದೆ.
ಪ್ರಕರಣದಲ್ಲಿ ಮಾಫಿ ಸಾಕ್ಷಿ ಕೋರಿ ಎ14 ಪ್ರದೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯ ಆರೋಪಿ ಪ್ರದೋಷ್ ಅರ್ಜಿಗೆ ದರ್ಶನ್ ಸೇರಿ ಆರೋಪಿಗಳ ವಾದ ಆಲಿಸಬೇಕಿಲ್ಲ . ಪ್ರದೋಷ್ ಮಾಫಿ ಸಾಕ್ಷಿಗೆ ಇತರೆ ಆರೋಪಿಗಳು ಆಕ್ಷೇಪಿಸುವಂತಿಲ್ಲ ಎಂದು ಆದೇಶಿಸಿದೆ.
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಸಂಬಂಧ ತಮ್ಮ ವಾದವನ್ನೂ ಆಲಿಸಬೇಕೆಂದು ಕೋರಿ ನಟ ದರ್ಶನ್ ಸೇರಿ ಇತರೆ ಆರೋಪಿಗಳ ವಕೀಲರು ಮಾಡಿದ್ದ ಮನವಿಯನ್ನು ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.
Key words: Renukaswamy Murder case, Pardon witness, application, Court







