Sunday, September 27, 2026

BDA Apartments

Home Front Page ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ: ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ: ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ

ನವದೆಹಲಿ,ಆಗಸ್ಟ್,11,2026 (www.justkannada.in): ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ರಾಜ್ಯಕ್ಕೆ ಅನ್ಯಾಯವಾಗುವ ರೀತಿ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶಿಸಿದೆ.

ಮುಂದಿನ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶಿಸಿದೆ. ಇಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ರೀತಿ ಆದೇಶ ಹೊರಡಿಸಲಾಗಿದೆ. ಒಟ್ಟಾರೆ 15 ದಿನಗಳಲ್ಲಿ 15.6 ಟಿಎಂಸಿ ನೀರು ಹರಿಸುವಂತೆ ಆದೇಶಿದೆ.ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ cauvery- cwrc cauvery cwrc

ರಾಜ್ಯದಲ್ಲಿ ಮುಂಗಾರು ಮಳೆ ಸರಿಯಾಗಿ ಆಗದ ಹಿನ್ನೆಲೆ ರೈತರು ಸಂಕಷ್ಟಕ್ಕೀಡಾಗಿದ್ದು ಇತ್ತೀಚೆಗೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾದರೂ ಸಹ ಕಬಿನಿ ಜಲಾಶಯ ಭರ್ತಿಯಾಗಿದೆ. ಆದರೆ ಕೆಆರ್ ಎಸ್ ಅಣೆಕಟ್ಟೆ ಭರ್ತಿಯಾಗಿಲ್ಲ.

ಇನ್ನು ಮಧ್ಯಾಹ್ನ 3 ಗಂಟೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಿದ್ದು ಸಭೆಯಲ್ಲಿ ಏನು ನಿರ್ಧಾರ ಬರಲಿದೆ ಎಂದು ಕಾದು ನೋಡಬೇಕಿದೆ.ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ jk02_new jk02 new

Key words: Cauvery issue, CWRC, orders, release ,water , Tamil Nadu