ಮಂಡ್ಯ,ಆಗಸ್ಟ್,12,2026 (www.justkannada.in): ತಮಿಳುನಾಡಿಗೆ ನೀರು ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ವಿರುದ್ದ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದ್ದು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಪ್ರತಿಭಟನೆ ಶುರುವಾಗಿದೆ. 
ಮಂಡ್ಯದ ಕಾವೇರಿ ಭವನದ ಕಾವೇರಿ ಪ್ರತಿಮೆ ಬಳಿ ಜಮಾಯಿಸಿದ ರೈತರು ಹಿಂದೂಪರ ಕಾರ್ಯಕರ್ತರು, ಕನ್ನಡಪರ ಸಂಘಟನೆ ಕಾರ್ಯಕರ್ತರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೋಗ ಬೇಢಮ್ಮ ನಮ್ಮ ಬಿಟ್ಟು ಹೋಗಬೇಡಮ್ಮ ಎಂದು ಘೋಷಣೆ ಕೂಗಿ ಧರಣಿ ನಡೆಸಿದ್ದಾರೆ.
ನಿನ್ನೆ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಲಾಗಿತ್ತು. ಈ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿದೆ.
Key words: Cauvery dispute, Protest, Mandya, condemning, CWMA order







