ಬೆಂಗಳೂರು,ಆಗಸ್ಟ್,12,2026 (www.justkannada.in): ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶ ಖಂಡಿಸಿ ನಾಳೆ ಕರ್ನಾಟಕ ಬಂದ್ ಕರೆ ನೀಡಲಾಗಿದ್ದು ಬಂದ್ ಗೆ ನಮ್ಮ ಬೆಂಬಲವಿಲ್ಲವೆಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಕಾವೇರಿ ಹೋರಾಟಕ್ಕೆ ಬೆಂಬಲವಿದೆ ಬಂದ್ ಗೆ ಬೆಂಬಲವಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕ ಬಂದ್ ಬೇಡ ವಾಟಾಳ್ ನಾಗರಾಜ್ ಕರೆ ನೀಡಿರುವ ಬಂದ್ ಗೆ ಬೆಂಬಲವಿಲ್ಲ ಎಂದಿದ್ದಾರೆ.
ನಿನ್ನೆ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ 15 ದಿನಗಳ ಕಾಲ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಈ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿದ್ದು ಈ ಬೆನ್ನಲ್ಲೆ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ನಾಳೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
Key words: We do not, support, tomorrow, Karnataka bandh, Karave President ,Praveen Shetty







