Saturday, November 14, 2026

Dasara Wishes

Happy Dasara
Home Front Page ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಪ್ರತಿಟನೆ, ಕಾಡಾ ಕಚೇರಿಗೆ ಮುತ್ತಿಗೆ

ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಪ್ರತಿಟನೆ, ಕಾಡಾ ಕಚೇರಿಗೆ ಮುತ್ತಿಗೆ

ಮೈಸೂರು,ಆಗಸ್ಟ್,12,2026 (www.justkannada.in): ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ರೈತ ಸಂಘದಿಂದ ಕಾಡಾ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ಅಯ್ಯಯ್ಯೋ ಅನ್ಯಾಯ ಎಂದು ಘೋಷಣೆ ಕೂಗಿದ ಪ್ರತಿಭಟನಾ ನಿರತ ರೈತರು ಯಾವುದೇ ಕಾರಣಕ್ಕೂ ನೀರು ಬಿಡಬಾರದು. ನಮ್ಮ ಕೆರೆಕಟ್ಟೆಗಳು ಜಾನುವಾರುಗಳಿಗೆ ನೀರಿಲ್ಲ. ಈ ಬಾರಿ ಮುಂಗಾರು ಮಳೆ ಕೊಟ್ಟಿದೆ. ನಮಗೆ ನೀರಿಲ್ಲದ ಸಮಯದಲ್ಲಿ ಅವರಿಗೆ ನೀರು ಬಿಡೋದು ಅನ್ಯಾಯ. ಸರ್ವ ಪಕ್ಷಗಳ ಸಭೆಯ ನಿರ್ಣಯದಂತೆ ನೀರು ಬಿಡಬಾರದು ಎಂದು ಆಗ್ರಹಿಸಿದರು.ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಮೈಸೂರಿನಲ್ಲಿ ರೈತರಿಂದ ಪ್ರತಿಟನೆ, ಕಾಡ...

ಅಲ್ಲದೆ ಅಧಿಕಾರಿಗಳ ಕಚೇರಿಗೆ ಬೀಗ ಹಾಕಲು ಪ್ರತಿಭಟನಾನಿರತ ರೈತರು ಯತ್ನಿಸಿದ್ದು ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದು ರೈತರನ್ನು ಪೊಲೀಸರು ತಡೆದರು. ಈ ಸಮಯದಲ್ಲಿ ರೈತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ಕ್ರಿಯಾ ಸಮಿತಿ ವತಿಯಿಂದ ಪ್ರತಿಭಟನೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ನಗರದ ದೊಡ್ಡ ಗಡಿಯಾರದ ಬಳಿ ರಸ್ತೆ ತಡೆದು ಕಾವೇರಿ ಕ್ರಿಯಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ಕಾವೇರಿ ಕ್ರಿಯಾ ಸಮಿತಿಯ ಅಧ್ಯಕ್ಷ ಜಯಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರದ್ದು ಗೊಳಿಸುವಂತೆ ಆಗ್ರಹಿಸಿದರು.  ರಾಜ್ಯದ ಪಾಲಿಗೆ ಪದೇ ಪದೇ ಅನ್ಯಾಯವಾಗುತ್ತಿದೆ. ಪ್ರಾಧಿಕಾರದಿಂದ ರಾಜ್ಯಕ್ಕೆ ಯಾವಾಗಲು ಅನುಕೂಲವಾಗಿಲ್ಲ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಪ್ರಾಧಿಕಾರದ ಆದೇಶದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರತಿಭಟನೆ ಮತ್ತಷ್ಟು ಉಗ್ರವಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ jk02_new jk02 new

Key words: water, Tamil Nadu, Farmers, protest, Mysore