ಬೆಂಗಳೂರು,ಆಗಸ್ಟ್,13,2026 (www.justkannada.in): ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಇಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದ ಬಳಿ ವಾಟಾಳ್ ನಾಗರಾಜ್ ಅವರನ್ನ ಸದಾಶಿವನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಮಧ್ಯೆಯೂ ವಾಟಾಳ್ ನಾಗರಾಜ್ ಅವರು ಬಾಯಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆಗೆ ಮುಂದಾದರು. ಇಂದು ಕರೆ ನೀಡಿರುವ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಎಂದಿನಂತೆ ಬಸ್ ಆಟೋ ಟ್ಯಾಕ್ಸಿಗಳ ಸಂಚಾರವಿದೆ.
Key words: Karnataka Bandh, Vatal Nagaraj, custody, police







