Thursday, August 13, 2026

BDA Apartments

Home Front Page ‘ಹರ್ ಘರ್ ತಿರಂಗಾ’ ಕರೆ : ರಾಷ್ಟ್ರಭಕ್ತಿ ಮತ್ತು ದೇಶದ ಅಭಿವೃದ್ಧಿ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿದೆ-ಡಾ....

‘ಹರ್ ಘರ್ ತಿರಂಗಾ’ ಕರೆ : ರಾಷ್ಟ್ರಭಕ್ತಿ ಮತ್ತು ದೇಶದ ಅಭಿವೃದ್ಧಿ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿದೆ-ಡಾ. ಈ.ಸಿ. ನಿಂಗರಾಜ್ ಗೌಡ

ಮೈಸೂರು,ಆಗಸ್ಟ್,13,2026 (www.justkannada.in): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ಹರ್ ಘರ್ ತಿರಂಗಾ’ ಕರೆ ದೇಶದ ಪ್ರತಿಯೊಬ್ಬ ನಾಗರಿಕರಲ್ಲೂ ರಾಷ್ಟ್ರಭಕ್ತಿ ಮತ್ತು ದೇಶದ ಅಭಿವೃದ್ಧಿಯ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮೈಸೂರು ವಿಭಾಗದ ಸಹ ಪ್ರಭಾರಿ ಡಾ. ಈ.ಸಿ. ನಿಂಗರಾಜ್ ಗೌಡ ನುಡಿದರು.

ದೇಶಾದ್ಯಂತ ನಡೆಯುತ್ತಿರುವ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಡಾ. ಈ.ಸಿ. ನಿಂಗರಾಜ್ ಗೌಡ ಅವರು ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದ ಸಂದೇಶ ಸಾರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಈ.ಸಿ. ನಿಂಗರಾಜ್ ಗೌಡ ಅವರು, “ತ್ಯಾಗ, ಸಮೃದ್ಧಿ ಮತ್ತು ಶಾಂತಿಯ ಸಂಕೇತವಾಗಿರುವ ತ್ರಿವರ್ಣ ಧ್ವಜ ಹಾಗೂ ‘ವಂದೇ ಮಾತರಂ’ ಘೋಷಣೆ ದೇಶಕ್ಕಾಗಿ ಸಾವಿರಾರು ದೇಶಭಕ್ತರು ತಮ್ಮ ಜೀವನವನ್ನು ತ್ಯಾಗ ಮಾಡಲು ಹಾಗೂ ಕೋಟ್ಯಂತರ ಜನರು ಉತ್ತಮ ಭಾರತ ನಿರ್ಮಾಣಕ್ಕಾಗಿ ಶ್ರಮಿಸಲು ಪ್ರೇರಣೆ ನೀಡಿವೆ. ವಿಕಸಿತ ಭಾರತ  ನಿರ್ಮಾಣದ ಗುರಿಯೊಂದಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಬೇಕು ಎಂದು  ತಿಳಿಸಿದರು.

ರಾಷ್ಟ್ರಧ್ವಜದ ಗೌರವವನ್ನು ಕಾಪಾಡುವುದರ ಜೊತೆಗೆ ದೇಶದ ಏಕತೆ, ಅಖಂಡತೆ, ಶಾಂತಿ ಮತ್ತು ಸಮೃದ್ಧಿಗಾಗಿ ಎಲ್ಲರೂ ಸಂಕಲ್ಪ ತೊಡಬೇಕು ಎಂದು  ಹೇಳಿದರು.

Key words: ‘Har Ghar Tiranga’ campaign, Mysore, Dr. E.C. Ningaraj Gowda