Friday, August 14, 2026

BDA Apartments

Home Crime ಮೈಸೂರು: ಮದುವೆ ನಿಶ್ಚಯವಾಗಿದ್ದ ಜೋಡಿ ಆತ್ಮಹತ್ಯೆಗೆ ಶರಣು

ಮೈಸೂರು: ಮದುವೆ ನಿಶ್ಚಯವಾಗಿದ್ದ ಜೋಡಿ ಆತ್ಮಹತ್ಯೆಗೆ ಶರಣು

ಮೈಸೂರು,ಆಗಸ್ಟ್,14,2026 (www.justkannada.in): ಮದುವೆ ನಿಶ್ಚಯವಾಗಿದ್ದ ಕೇರಳ ಮೂಲದ  ಜೋಡಿಗಳು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕಾಸರಗೋಡಿನ ಪಳ್ಳಿಕ್ಕರ ಮೂಲದ ಪಿ. ಅನುಶ್ರೀ(25) ಕಣ್ಣೂರು ಮೂಲದ ವಿ. ಅಮಲ್ (26) ಮೃತರು. ಅನುಶ್ರೀ ಹುಣಸೂರು ಪಟ್ಟಣದ ಎಸ್ ಬಿಐ ಉದ್ಯೋಗಿಯಾಗಿದ್ದರು. ಕೇರಳದ ವಿ.ಅಮುಲ್ ಜೊತೆ ನಿಶ್ಚಿತಾರ್ಥವಾಗಿತ್ತು. ಡಿಸೆಂಬರ್ 26 ರಂದು ಮದುವೆ ದಿನಾಂಕ ನಿಗದಿಯಾಗಿತ್ತು. ಈ ನಡುವೆ ಅನುಶ್ರೀ, ಹುಣಸೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಇದೀಗ ಅನುಶ್ರೀ ಶವವಾಗಿ ಪತ್ತೆಯಾದ ಕೆಲವೇ ಗಂಟೆಗಳಲ್ಲಿ‌ಅಮುಲ್ ಕೂಡ ಸಾವನ್ನಪ್ಪಿದ್ದಾನೆ. ಕೊಚ್ಚಿಯ ಎರ್ನಾಕುಲಂ ನಾರ್ತ್ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್ ಕೊಠಡಿಯಲ್ಲಿ ಅಮಲ್ ಶವವಾಗಿ ಪತ್ತೆಯಾಗಿದ್ದಾನೆ.

ಮೃತ ಅನುಶ್ರೀ ಅವರು ಪಳ್ಳಿಕ್ಕರದ ಕೆ. ಚಂದ್ರನ್ ಹಾಗೂ ರೀನಾ ದಂಪತಿಯ ಪುತ್ರಿ, ಅಮಲ್ ಅವರು ಕಣ್ಣೂರಿನ ಅಂಬಲತಟ್ಟುವಿನ ಸುಧಾಕರನ್ ಮತ್ತು ಅನಿತಾ ದಂಪತಿಯ ಪುತ್ರರಾಗಿದ್ದಾರೆ. ಇತ್ತೀಚೆಗಷ್ಟೇ ಇಬ್ಬರ ನಿಶ್ಚಿತಾರ್ಥ ನೆರವೇರಿತ್ತು. ಕಳೆದ ಶನಿವಾರವಷ್ಟೇ ಇಬ್ಬರೂ ಕಾಸರಗೋಡಿನ ಮನೆಗೆ ಬಂದು ಭಾನುವಾರ ಸಂಜೆ ವಾಪಸ್ ತೆರಳಿದ್ದರು.

Key words: Mysore, Engaged, couple, commits suicide