ಬೆಂಗಳೂರು,ಆಗಸ್ಟ್,14,2026 (www.justkannada.in): ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಸೂಚನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ರಿಜ್ವಾನ್ ಅರ್ಷದ್, ತಾತ್ಕಾಲಿಕವಾಗಿ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ಸ್ಥಗಿತಗೊಳಿಸಲಾಗಿದೆ. ಜನರ ಹಿತರಕ್ಷಣೆ ಹಾಗೂ ಪ್ರಸ್ತುತ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಪರಿಶೀಲನಾ ಕಾರ್ಯಾಚರಣೆಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಅರ್ಹ ಬಡ ಕುಟುಂಬಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಇನ್ನೂ ಸುಮಾರು 2.65 ಕೋಟಿ ಪಡಿತರ ಚೀಟಿಗಳ ಇ-ಕೆವೈಸಿ ಪರಿಶೀಲನೆ ಬಾಕಿ ಉಳಿದಿದೆ. ಸೆಪ್ಟಂಬರ್ 30ರೊಳಗೆ ಇ-ಕೆವೈಸಿ ಮಾಡಿಸಬೇಕು. ಕೇಂದ್ರದಿಂದ ನಿರ್ದೇಶನ ಬಂದಿದೆ. ಎಷ್ಟು ಕಾರ್ಡ್ ರದ್ದಾಗುತ್ತೋ ಅಷ್ಟು ಕಾರ್ಡ್ ಕೊಡುತ್ತೇವೆ ಎಂದರು.
ಇ-ಕೆವೈಸಿ ಪ್ರಕ್ರಿಯೆ ಸಂಪೂರ್ಣ ಮುಗಿದ ನಂತರವಷ್ಟೇ ಅನರ್ಹ ಕಾರ್ಡ್‌ಗಳ ನಿಖರ ಸಂಖ್ಯೆ ತಿಳಿದುಬರಲಿದೆ. ಆ ಬಳಿಕ ರದ್ದಾಗುವ ಅನರ್ಹ ಕಾರ್ಡ್‌ಗಳ ಸಂಖ್ಯೆಗೆ ಅನುಗುಣವಾಗಿ, ಹೊಸದಾಗಿ ಕಾಯುತ್ತಿರುವ ನೈಜ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿಗಳನ್ನು ಮರುಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದರು.
Key words: BPL card, revision, temporarily, halted, Minister, Rizwan Arshad






