Saturday, August 15, 2026

BDA Apartments

Home Crime ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ: ಮೂವರು ಸಾವು

ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ: ಮೂವರು ಸಾವು

ಚಾಮರಾಜನಗರ,ಆಗಸ್ಟ್,15,2026 (www.justkannada.in): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿರುವ ಘಟನೆ ನಡೆದಿದೆ.

ಕಾಡಿಗೆ ಅಕ್ರಮವಾಗಿ ಪ್ರವೇಶಿಸಿದ್ದ ಕೆಲವರು ಕಾಡುಪ್ರಾಣಿಯನ್ನು ಬೇಟೆಯಾಡಿ, ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಕಾವೇರಿ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಈ ವೇಳೆ ಶಸ್ತ್ರಾಸ್ತ್ರಗಳನ್ನು ಕೆಳಗಿಟ್ಟು ಶರಣಾಗುವಂತೆ ಸಿಬ್ಬಂದಿ ಸೂಚಿಸಿದ್ದಾರೆ. ಆದರೆ ಬೇಟೆಗಾರರು ಅರಣ್ಯ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ ಹಿನ್ನೆಲೆಯಲ್ಲಿ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡಿಗೆ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಮೃತರನ್ನು ಹನೂರು ತಾಲೂಕಿನ ತೋಮಿಯರ್ ಪಾಳ್ಯದ ನಿವಾಸಿಗಳಾದ ಅಂತೋನಿಸ್ವಾಮಿ, ಕುಮಾರ್ ಹಾಗೂ ಪೀಟರ್ ಎಂದು ಗುರುತಿಸಲಾಗಿದೆ.

ಮೃತದೇಹಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಬೇಟೆಗಾರರು ಬಳಸಿದ್ದ ಶಸ್ತ್ರಾಸ್ತ್ರಗಳು ಹಾಗೂ ಬೇಟೆಯಾಡಲಾದ ವನ್ಯಜೀವಿ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

ENGLISH SUMMARY…

Chamarajanagar

Three Suspected Poachers Killed in Forest Staff Firing

Three suspected poachers were killed in an exchange of fire with forest personnel in the Datti forest area of Shagya, Hanur taluk, Chamarajanagar district.

The men were allegedly hunting a wild animal and separating its meat when forest staff on patrol confronted them. Officials reportedly asked them to surrender, but the poachers allegedly opened fire, prompting retaliatory firing.

The deceased have been identified as Anthonyswamy, Kumar and Peter, residents of Thomiyar Palya. Their bodies are being shifted to K.R. Hospital in Mysuru for further procedures.

Key words: Chamarajanagar, Three, Suspected, Poachers, Killed,  Forest Staff, Firing