Wednesday, September 30, 2026

BDA Apartments

80ನೇ ಸ್ವಾತಂತ್ರ್ಯ ದಿನಾಚರಣೆ: ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯರಿ...
Home Front Page 80ನೇ ಸ್ವಾತಂತ್ರ್ಯ ದಿನಾಚರಣೆ: ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಧ್ವಜಾರೋಹಣ

80ನೇ ಸ್ವಾತಂತ್ರ್ಯ ದಿನಾಚರಣೆ: ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಧ್ವಜಾರೋಹಣ

ಮೈಸೂರು, ಆಗಸ್ಟ್, 15 (www.justkannada.in):  ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಪಂಜಿನ ಕವಾಯತು ಮೈದಾನದಲ್ಲಿ ಅದ್ದೂರಿಯಾಗಿ 80 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಇಲಾಖೆಯ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಧ್ವಜಾರೋಹಣ ಮಾಡಿದರು.

ಸಚಿವ ಯತೀಂದ್ರ ಸಿದ್ದರಾಮಯ್ಯ ಧ್ವಜ ವಂದನೆ ಸ್ವೀಕರಿಸಿ, ತುಕಡಿಗಳ ಪರಿವೀಕ್ಷಣೆ ನಡೆಸಿದರು. 24 ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ನಂತರ ಸಚಿವರು ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ನೀಡಿದರು.80ನೇ ಸ್ವಾತಂತ್ರ್ಯ ದಿನಾಚರಣೆ yathi

ವಿವಿಧ ಶಾಲೆಗಳ ಮಕ್ಕಳಿಂದ ದೇಶಭಕ್ತಿ ಗೀತೆಗಳಿಗೆ ನೃತ್ಯ ಪ್ರದರ್ಶನ ಮಾಡಲಾಯಿತು.  ಅಪಘಾತ ರಹಿತ ವಾಹನ ಚಾಲನೆ ಮಾಡಿದ ಕೆ ಎಸ್ ಆರ್ ಟಿ ಸಿ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡಲಾಯಿತು.

ನರಸಿಂಹರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ಸಮಾರಂಭದ  ಅಧ್ಯಕ್ಷತೆ ವಹಿಸಿದ್ದರು.ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಧ್ವಜಾರೋಹಣ yathi1

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎನ್ ರಂಗಸ್ವಾಮಿ, ಮೈಸೂರು ಪೇಂಟ್ಸ್ ಆಂಡ್ ವಾರ್ನಿಶ್ ಲಿಮಿಟೆಡ್ ನ ಅಧ್ಯಕ್ಷ  ಹೆಚ್ ಡಿ ಗಣೇಶ್,ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ  ಅಯೂಬ್ ಖಾನ್, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ  ನಿತೀಶ್ ಪಾಟೀಲ್, ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ  ಎಂ ಕೆ ಸವಿತಾ,  ಅಪರ ಜಿಲ್ಲಾಧಿಕಾರಿ  ಐಶ್ವರ್ಯ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.80ನೇ ಸ್ವಾತಂತ್ರ್ಯ ದಿನಾಚರಣೆ: ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯರಿ...

Key words: 80th Independence Day, Minister, Yathindra Siddaramaiah, hoists, flag , Mysore