Monday, August 17, 2026

BDA Apartments

Home Front Page ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ  ಮತ್ತೆ ಶಾಕ್, CWMA ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ  ಮತ್ತೆ ಶಾಕ್, CWMA ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ, ಆಗಸ್ಟ್, 17, 2026 (www.justkannada.in):   ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಿದ್ದು,  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್  ಎತ್ತಿ ಹಿಡಿದಿದೆ.

15 ದಿನಗಳ ಕಾಲ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯುಎಂಎ ನೀಡಿದ್ದ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ   ಸುಪ್ರೀಂಕೋರ್ಟ್  ಸೂಚನೆ ನೀಡಿದೆ. ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ, ಸುಪ್ರೀಂ ಕೋರ್ಟ್ ಈ ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆಯನ್ನು  ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ.

ತಮಿಳುನಾಡಿಗೆ ಈಗಾಗಲೇ 3,500 ಕ್ಯೂಸೆಕ್ ನೀರು ಹರಿಸಲಾಗಿದೆ. ಸಿಡಬ್ಲ್ಯುಎಂಎ ಆದೇಶವನ್ನು ಪಾಲಿಸಲು ರಾಜ್ಯ ಪ್ರಯತ್ನಿಸುತ್ತಿದೆ. ಬಿಳಿಗುಂಡ್ಲು ಬಳಿ ನೀರಿನ ಪ್ರಮಾಣವನ್ನು ಅಳೆಯಲಾಗುತ್ತದೆ. 12 ಸಾವಿರ ಕ್ಯೂಸೆಕ್ ಪ್ರಮಾಣದ ನೀರು ಅಲ್ಲಿ ದಾಖಲಾಗಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಕರ್ನಾಟಕದ ಪರ ವಾದ ಮಂಡಿಸಲಾಗಿದೆ.

Key words: Karnataka, Cauvery issue, Supreme Court, upholds, CWMA, order