Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Cinema ಆರೋಪಿ ನಟ ದರ್ಶನ್ ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್

ಆರೋಪಿ ನಟ ದರ್ಶನ್ ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು,ಆಗಸ್ಟ್,17,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಲು ಅವಕಾಶ ನೀಡಬೇಕು ಎಂದು  ಕೋರಿ ಆರೋಪಿ ನಟ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ.

ಕೋರ್ಟ್ ವಿಚಾರಣೆಯಲ್ಲಿ ತಮಗೆ ವಿಡಿಯೋ ಕಾನ್ಫರೆನ್ಸ್ ಬದಲು ಖುದ್ದಾಗಿ ಹಾಜರಾಗಲು ಅವಕಾಶ ನೀಡಬೇಕು ಎಂದು ಕೋರಿ ನಟ ದರ್ಶನ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿರುವ 59ನೇ ಸಿಸಿಹೆಚ್ ಕೋರ್ಟ್, ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳ ಹಾಜರಿಗೆ ಸೂಚನೆ ನೀಡಿದೆ.ಆರೋಪಿ ನಟ ದರ್ಶನ್ ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್ renukaswamy-...

ಆರೋಪಿಗಳು ತಮ್ಮ ವಕೀಲರೊಂದಿಗೆ ಮಾತನಾಡಲು ಖಾಸಗಿತನದ ವ್ಯವಸ್ಥೆ ಕಲ್ಪಿಸಲು ಕೋರ್ಟ್ ಸೂಚನೆ ನೀಡಿದೆ. ನಿಯಮ 8.3 ಅಡಿಯಲ್ಲಿ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ. ಸಾಕ್ಷ್ಯ ವಿಚಾರಣೆ ವೇಳೆ ಅಗತ್ಯವಿರುವಾಗ ಸಂಪರ್ಕದ ಅವಕಾಶ ನೀಡಬೇಕು. ಸಾಕ್ಷ್ಯ ವಿಚಾರಣೆಗೆ ಮೊದಲು, ನಡುವೆ, ನಂತರ ಸಂಪರ್ಕಿಸಬಹುದು. ಸಾಕ್ಷಿಗಳ ಹೇಳಿಕೆಯನ್ನು ಸ್ಪಷ್ಟವಾಗಿ ಕೇಳುವಂತೆ ವ್ಯವಸ್ಥೆ ಕಲ್ಪಿಸಿ ಎಂದು ಸಿವಿಲ್ ಕೋರ್ಟ್​ನ ತಾಂತ್ರಿಕ ವಿಭಾಗಕ್ಕೆ  ನ್ಯಾಯಾಲಯ ಸೂಚಿಸಿದೆ.ಆರೋಪಿ ನಟ ದರ್ಶನ್ ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್ jk02_new jk0...

Key words: Renukaswamy Murder Case, Court, dismisses, petition, actor Darshan