Sunday, October 4, 2026

BDA Apartments

Home Front Page ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ

ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ

ಬೆಂಗಳೂರು,ಆಗಸ್ಟ್,18,2026 (www.justkannada.in):  ಕರ್ನಾಟಕ ವಿಧಾನಸಭೆಯ ಉಪಸಭಾದ್ಯಕ್ಷರಾಗಿ ಭಟ್ಕಳ ಶಾಸಕ ಮಂಕಾಳ ವೈದ್ಯ ಮತ್ತು ವಿಧಾನಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿನ್ನೆ ಉಪಸಭಾದ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಮತ್ತು ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇದೀಗ  ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮ...

ಇಂದು ಬೆಳಗ್ಗೆ ವಿಧಾನಸಭೆಯಲ್ಲಿ ಉಪಸಭಾದ್ಯಕ್ಷ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಲಕ್ಷ್ಮಣ್ ಸವದಿ ಅವರು ಮಂಕಾಳು  ವೈದ್ಯ ಅವರ ಹೆಸರನ್ನು ಅನುಮೋದಿಸಿದರು. ಬಳಿಕ ಸದನ ಎಲ್ಲಾ ಸದಸ್ಯರ ಸರ್ವಾನುಮತದಿಂದ ಮಂಕಾಳ ವೈದ್ಯ ಅವರು ಉಪಸಭಾದ್ಯಕ್ಷರಾಗಿ ಆಯ್ಕೆಯಾದರು. ನಂತರ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉಪ ಸಭಾಧ್ಯಕ್ಷರ ಪೀಠದಲ್ಲಿ ಕೂರಿಸಿದರು.ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ jk02_new jk02 new

ವಿಧಾನ ಪರಿಷತ್​ ನಲ್ಲಿ ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ  ಹಿರಿಯ ನಟಿ ಉಮಾಶ್ರೀ ಅವರು ಅವಿರೋಧವಾಗಿ ಆಯ್ಕೆಯಾದರು.

Key words: Mankala Vaidya, Deputy Speaker, Umashree, Council, Deputy Chairperson