Sunday, October 4, 2026

BDA Apartments

Home Crime ಕಾವೇರಿ ವನ್ಯಧಾಮದ ಆ್ಯಂಟಿ ಪೋಚಿಂಗ್ ಕ್ಯಾಂಪ್‌ ಗಳ ಮೇಲೆ ಜೆಲಟಿನ್ ದಾಳಿ

ಕಾವೇರಿ ವನ್ಯಧಾಮದ ಆ್ಯಂಟಿ ಪೋಚಿಂಗ್ ಕ್ಯಾಂಪ್‌ ಗಳ ಮೇಲೆ ಜೆಲಟಿನ್ ದಾಳಿ

ಚಾಮರಾಜನಗರ,ಆಗಸ್ಟ್,19,2026 (www.justkannada.in):  ಕಾವೇರಿ ವನ್ಯಜೀವಿ ಧಾಮದಲ್ಲಿ ವನ್ಯಜೀವಿಗಳ ಅಕ್ರಮ ಬೇಟೆ ತಡೆಯಲು ನಿರ್ಮಿಸಲಾಗಿರುವ ಆ್ಯಂಟಿ ಪೋಚಿಂಗ್ ಕ್ಯಾಂಪ್‌ಗಳನ್ನೇ ಗುರಿಯಾಗಿಸಿಕೊಂಡು ಜೆಲಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ನಡೆಸಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.

ಘಟನೆ ಒಂದು ದಿನದ ಹಿಂದೆಯೇ ನಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ಬಹಿರಂಗವಾಗಿದೆ. ಕ್ಯಾಂಪ್‌ ಗಳ ಮೇಲೆ ಜೆಲಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ನಡೆಸಿರುವುದು ಪ್ರಾಥಮಿಕ ಪರಿಶೀಲನೆಯಲ್ಲಿ ಕಂಡುಬಂದಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅರಣ್ಯ ಸಿಬ್ಬಂದಿಗೆ ಗಾಯಗಳಾಗಿಲ್ಲ. ಆದರೆ, ವನ್ಯಧಾಮದೊಳಗೆ ಅಕ್ರಮ ಚಟುವಟಿಕೆ ನಡೆಸುವವರ ವಿರುದ್ಧ ಕಾರ್ಯಾಚರಣೆ ನಡೆಸುವ ಸಿಬ್ಬಂದಿಯ ಸುರಕ್ಷತೆ ಬಗ್ಗೆ ಈ ಘಟನೆ ಗಂಭೀರ ಆತಂಕ ಮೂಡಿಸಿದೆ.

ಆ್ಯಂಟಿ ಪೋಚಿಂಗ್ ಕ್ಯಾಂಪ್‌ ಗಳು ಕಾವೇರಿ ವನ್ಯಧಾಮದಲ್ಲಿ ಬೇಟೆಗಾರರು ಹಾಗೂ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡುವ ಪ್ರಮುಖ ತಾಣಗಳಾಗಿವೆ. ಇಂತಹ ಕ್ಯಾಂಪ್‌ ಗಳನ್ನೇ ಗುರಿಯಾಗಿಸಿಕೊಂಡು ಸ್ಫೋಟ ನಡೆಸಿರುವುದರಿಂದ, ಇದರ ಹಿಂದೆ ಯಾರ ಕೈವಾಡವಿದೆ ಎಂಬ ಪ್ರಶ್ನೆ ಇದೀಗ ಎದ್ದಿದೆ.

ಸ್ಫೋಟಕ್ಕೆ ಬಳಸಲಾದ ಜೆಲಟಿನ್ ಕಡ್ಡಿಗಳು ಎಲ್ಲಿಂದ ಬಂದವು? ಕ್ಯಾಂಪ್‌ ಗಳಿರುವ ಸ್ಥಳದ ಬಗ್ಗೆ ಆರೋಪಿಗಳಿಗೆ ಮಾಹಿತಿ ನೀಡಿದವರು ಯಾರು? ಅರಣ್ಯ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡೇ ಈ ಕೃತ್ಯ ಎಸಗಲಾಗಿದೆಯೇ? ಎಂಬ ಹಲವು ಆಯಾಮಗಳಲ್ಲಿ ತನಿಖೆ ನಡೆಯಬೇಕಿದೆ.ಕಾವೇರಿ ವನ್ಯಧಾಮದ ಆ್ಯಂಟಿ ಪೋಚಿಂಗ್ ಕ್ಯಾಂಪ್‌ ಗಳ ಮೇಲೆ ಜೆಲಟಿನ್ ದಾಳಿ jiletin

ಘಟನೆಯ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಸ್ಫೋಟದ ಸ್ವರೂಪ ಹಾಗೂ ಅದರ ಹಿಂದಿರುವ ಉದ್ದೇಶದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರ ಪತ್ತೆಗೂ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಕಾವೇರಿ ವನ್ಯಧಾಮದಲ್ಲಿ ಇತ್ತೀಚೆಗೆ ಅಕ್ರಮ ಬೇಟೆ ಹಾಗೂ ವನ್ಯಜೀವಿ ಸಂರಕ್ಷಣೆಗೆ ಸಂಬಂಧಿಸಿದಂತೆ ಹಲವು ಸವಾಲುಗಳು ಎದುರಾಗಿರುವ ಸಂದರ್ಭದಲ್ಲಿ ಆ್ಯಂಟಿ ಪೋಚಿಂಗ್ ಕ್ಯಾಂಪ್‌ಗಳ ಮೇಲೆ ನಡೆದಿರುವ ಈ ದಾಳಿ ಮತ್ತಷ್ಟು ಗಂಭೀರವಾಗಿ ಪರಿಗಣಿಸುವಂತಾಗಿದೆ.ಕಾವೇರಿ ವನ್ಯಧಾಮದ ಆ್ಯಂಟಿ ಪೋಚಿಂಗ್ ಕ್ಯಾಂಪ್‌ ಗಳ ಮೇಲೆ ಜೆಲಟಿನ್ ದಾಳಿ jk02_new jk0...

ಅರಣ್ಯ ಸಿಬ್ಬಂದಿಯ ಸುರಕ್ಷತೆ, ಕ್ಯಾಂಪ್‌ ಗಳ ಭದ್ರತೆ ಹಾಗೂ ವನ್ಯಜೀವಿಗಳ ಸಂರಕ್ಷಣೆಯ ದೃಷ್ಟಿಯಿಂದ ಈ ಪ್ರಕರಣದ ತನಿಖೆಯನ್ನು ತೀವ್ರಗೊಳಿಸುವ ಅಗತ್ಯವಿದೆ.

Key words: Gelatin, attack, anti-poaching camps, Cauvery Wildlife Sanctuary