ಮಹಾಬಲಿಪುರಂ,ಆಗಸ್ಟ್,20,2026 (www.justkannada.in): ಮೇಕೆದಾಟು ಯೋಜನೆ ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡಿಗೂ ಮಹತ್ವದ ಯೋಜನೆಯಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ತಮಿಳುನಾಡಿನ ಮಹಾಬಲಿಪುರಂನಲ್ಲಿ (ಕೋವಲಂ) 31ನೇ ದಕ್ಷಿಣ ವಲಯ ಮಂಡಳಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಸಭೆಗೆ ಬರುತ್ತಿದ್ದಾಗ ಹಿರಿಯ ನಾಯಕರು ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ಕಾವೇರಿ ನೀರಿನ ಸಮಸ್ಯೆಯನ್ನು ನಾವು ಪರಿಹರಿಸಬೇಕಾಗಿದೆ ಎಂದು ನನಗೆ ಹೇಳಿದರು.
ಮೇಕೆದಾಟು ಯೋಜನೆಯಿಂದ ಹರಿಯುವ ಪ್ರತಿಯೊಂದು ಹನಿ ನೀರೂ ತಮಿಳುನಾಡು ಮತ್ತು ಪುದುಚೇರಿಯ ರೈತರಿಗೆ ನೆರವಾಗಲಿದೆ ಎಂಬ ಭರವಸೆಯನ್ನು ನಾನು ನೀಡುತ್ತೇನೆ. ನಮಗೆ ಸಹಾಯ ಮಾಡಿ, ನಾವು ನಿಮಗೆ ಸಹಾಯ ಮಾಡುತ್ತೇವೆ,” ಎಂದು ಅವರು ಹೇಳಿದರು.
ತಮ್ಮ ಭಾಷಣದ ಕೊನೆಯಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ವಿಚಾರಗಳನ್ನೂ ಅವರು ಪ್ರಸ್ತಾಪಿಸಿದರು. ಈ ಎರಡೂ ವಿಷಯಗಳು ದಕ್ಷಿಣ ರಾಜ್ಯಗಳಿಗೆ ಆದ್ಯತೆಯ ವಿಚಾರಗಳಾಗಿದ್ದು, ಈಗಿರುವ ಸಂಸತ್ ಸ್ಥಾನಗಳ ಸಂಖ್ಯೆಯಲ್ಲೇ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಯಾವುದೇ ರೀತಿಯ ವಿಳಂಬವಾಗಬಾರದು ಎಂದು ಅವರು ಹೇಳಿದರು.
Key words: Mekedatu project, important, also, Tamil Nadu, CM DK Shivakumar







