ಬೆಂಗಳೂರು,ಆಗಸ್ಟ್,21,2026 (www.justkannada.in): ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಅವರನ್ನು 7ದಿನದೊಳಗೆ ಮರುನೇಮಕ ಮಾಡಲು ಹೈಕೋರ್ಟ್ ಆದೇಶ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕೆಪಿಎಸ್ ಸಿ ಅಧ್ಯಕ್ಷರ ಬಗ್ಗೆ ರಾಜ್ಯಪಾಲರು ಈಗಾಗಲೇ ಆದೇಶ ಹೊರಡಿಸಿದ್ದಾರೆ. ಅವರನ್ನು ಆ ಹುದ್ದೆಯಲ್ಲಿ ಮುಂದುವರಿಸಬಾರದು ಎಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ ಕೋರ್ಟ್ ಗೆ ಹೋಗಿದ್ದರು. ಹೈಕೋರ್ಟ್ ಕೂಡ ಸಂಪುಟ ಸಭೆಯಲ್ಲಿ ಅಭಿಪ್ರಾಯ ಪಡೆಯಲು ಸೂಚಿಸಿದೆ.
ಸಂಪುಟ ಸಚಿವರುಗಳ ಅಭಿಪ್ರಾಯ ಪಡೆದು ಆದೇಶ ಮಾಡಿ ಅಂತಾ ತಿಳಿಸಿದೆ. ಈ ಕಾರಣದಿಂದಾಗಿ ರಾಜ್ಯಪಾಲರು ಹೊರಡಿಸಿದ ಆದೇಶ ಹಿಂಪಡೆದಿದ್ದಾರೆ. ನಾವು ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಸಂಪುಟದ ನಿರ್ಧಾರವನ್ನು ರಾಜ್ಯಪಾಲರಿಗೆ ತಿಳಿಸುತ್ತೇವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
Key words: Order, re-appoint, former KPCC president, cabinet meeting, Minister, Priyank Kharge







