Saturday, October 10, 2026

BDA Apartments

ಬಿ.ನಾಗೇಂದ್ರ ರಾಜೀನಾಮೆ ವೇಳೆ BDA JK_Adv BDA Adv
Home Front Page ಫುಟ್‌ ಪಾತ್ ಅತಿಕ್ರಮಣ ತೆರವುಗೊಳಿಸಿ, ದೇವರಾಜ ಮಾರುಕಟ್ಟೆಯಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಿ- ಮೈಕಾ...

ಫುಟ್‌ ಪಾತ್ ಅತಿಕ್ರಮಣ ತೆರವುಗೊಳಿಸಿ, ದೇವರಾಜ ಮಾರುಕಟ್ಟೆಯಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಿ- ಮೈಕಾ ಪ್ರೇಮ್ ಕುಮಾರ್

ಮೈಸೂರು,ಆಗಸ್ಟ್,24,2026 (www.justkannada.in):  ದೇವರಾಜ ಮಾರುಕಟ್ಟೆಯ ಬಳಿ ಫುಟ್‌ ಪಾತ್ ಅತಿಕ್ರಮಣ ತೆರವುಗೊಳಿಸಿ. ಸಾರ್ವಜನಿಕರ ಸುಗಮ ಸಂಚಾರಕ್ಕೆ  ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಮೈಸೂರು ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಮೈಕಾ ಪ್ರೇಮ್ ಕುಮಾರ್ ಆಗ್ರಹಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ವರಮಹಾಲಕ್ಷ್ಮೀ ಹಬ್ಬದ ವೇಳೆ ದೇವರಾಜ ಮಾರುಕಟ್ಟೆಯಲ್ಲಿ ಉಂಟಾದ ಪರಿಸ್ಥಿತಿ ಅತ್ಯಂತ ದುಃಖಕರವಾಗಿತ್ತು ಮಾರುಕಟ್ಟೆಗೆ ಆಗಮಿಸುವ  ಸಾರ್ವಜನಿಕರು ಸಂಚರಿಸಿ  ವ್ಯಾಪಾರ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ವ್ಯಾಪಾರಿಗಳಿಗೆ ನಿಗದಿಪಡಿಸಿರುವ ಸ್ಥಳವನ್ನು ಮೀರಿ ನಾಲ್ಕೈದು ಅಡಿ ಜಾಗದಲ್ಲಿಯೂ ಸರಕುಗಳನ್ನು ಇಟ್ಟು ವ್ಯಾಪಾರ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ, ಅದರಲ್ಲೂ ಮಹಿಳೆಯರಿಗೆ, ಸಂಚರಿಸಲು ತೀವ್ರ ತೊಂದರೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಗೌರಿ-ಗಣೇಶ ಹಬ್ಬ ಸೇರಿದಂತೆ ಹಲವು ಪ್ರಮುಖ ಹಬ್ಬಗಳಿರುವ ಹಿನ್ನೆಲೆ  ದೇವರಾಜ ಮಾರುಕಟ್ಟೆಯಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದೇವರಾಜ ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಫುಟ್‌ಪಾತ್‌ ಗಳನ್ನು ಅತಿಕ್ರಮಿಸಿ ಅಂಗಡಿಗಳನ್ನು ವಿಸ್ತರಿಸಿರುವುದು ಕಂಡುಬರುತ್ತಿದೆ. ಇದರಿಂದ ಪಾದಚಾರಿಗಳು ರಸ್ತೆಯಲ್ಲೇ ಸಂಚರಿಸುವಂತಾಗಿದೆ. ಹೀಗಾಗಿ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಜಂಟಿಯಾಗಿ ಅತಿಕ್ರಮಣ ತೆರವುಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.ಫುಟ್‌ ಪಾತ್ ಅತಿಕ್ರಮಣ ತೆರವುಗೊಳಿಸಿ jk02_new jk02 new

“ಗ್ರಾಹಕರು ಬಂದಾಗ ಮಾತ್ರ ವ್ಯಾಪಾರ ನಡೆಯುತ್ತದೆ. ಆದರೆ, ಗ್ರಾಹಕರೇ ಮಾರುಕಟ್ಟೆಗೆ ಬರಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾದರೆ, ಅದರಿಂದ ವ್ಯಾಪಾರಿಗಳಿಗೂ ನಷ್ಟವಾಗುತ್ತದೆ ಮೈಕಾ ಪ್ರೇಮ್ ಕುಮಾರ್  ತಿಳಿಸಿದರು.

Key words: Clear, foot path, encroachment,Devaraja Market, Mysore,  Mika Prem Kumar