Tuesday, August 25, 2026

BDA Apartments

Home Front Page ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆ: CWRC ಆದೇಶ ಎತ್ತಿಹಿಡಿದ CWMA

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆ: CWRC ಆದೇಶ ಎತ್ತಿಹಿಡಿದ CWMA

ನವದೆಹಲಿ, ಆಗಸ್ಟ್, 25,2026 (www.justkannada.in):  ಕಾವೇರಿ ನದಿ ನೀರು ವಿವಾದಕ್ಕೆ  ಸಂಬಂಧಿಸಿದಂತೆ  ಕರ್ನಾಟಕಕ್ಕೆ ಮತ್ತೆ ಭಾರಿ ಹಿನ್ನಡೆಯಾಗಿದ್ದು, ಪ್ರತಿ ದಿನ ತಮಿಳುನಾಡಿಗೆ 9000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿದ್ದ ಶಿಫಾರಸ್ಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದೆ.

ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಲಾಗಿದೆ.  ನಿನ್ನೆ ಸಿಡಬ್ಲ್ಯುಆರ್ ಸಿ  ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್ ನೀರು ಹರಿಸಲು ಶಿಫಾರಸ್ಸು ಮಾಡಿತ್ತು. ಇದನ್ನ ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಪರಿಶೀಲಿಸುವಂತೆ ಕರ್ನಾಟಕ ಮನವಿ ಮಾಡಿತ್ತು. ಆದರೆ ಸಿಡಬ್ಲ್ಯುಎಂಎ ಸಹ ಶಾಕ್ ನೀಡಿದೆ.

ಸಭೆಯಲ್ಲಿ ರಾಜ್ಯದಿಂದ ಎಸಿಎಸ್ (ಮುಖ್ಯ ಕಾರ್ಯದರ್ಶಿ) ಗೌರವ್ ಗುಪ್ತಾ ಹಾಗೂ ಕಾವೇರಿ ನೀರಾವರಿ ನಿಗಮ ಎಂಡಿ ಮಹೇಶ್ ಭಾಗಿಯಾಗಿದ್ದರು. ತಮಿಳುನಾಡಿನಿಂದ ನೀರಾವರಿ ಕಾರ್ಯದರ್ಶಿ ಪ್ರಶಾಂತ್, ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯಂ ಭಾಗಿಯಾಗಿದ್ದರು.

Key words: state, Cauvery issue, CWMA, upholds, CWRC, order