ಬೆಂಗಳೂರು,ಆಗಸ್ಟ್,25,2026 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಗೆ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಪುಟ್ಟಣ್ಣ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯದರ್ಶಿಯವರ ಸೂಚನೆಯಂತೆ, *ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಅಧಿನಿಯಮ 1992ರ ಪ್ರಕರಣ 18(1)(9)*ರನ್ವಯ ಈ ನಾಮನಿರ್ದೇಶನ ಮಾಡಲಾಗಿದೆ. ವಿಧಾನ ಪರಿಷತ್ತಿನ ಸಭಾಪತಿಯವರು ಆಗಸ್ಟ್ 25, 2026ರಿಂದ ಜಾರಿಗೆ ಬರುವಂತೆ ಶಾಸಕ ಪುಟ್ಟಣ್ಣ ಅವರನ್ನು ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಗೆ ನಾಮನಿರ್ದೇಶನ ಮಾಡಿದ್ದಾರೆ.
ಈ ಕುರಿತು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಅಧಿಕೃತ ಪತ್ರ ರವಾನಿಸಲಾಗಿದೆ. ನಾಮನಿರ್ದೇಶನದ ಮಾಹಿತಿಯನ್ನು ವಿಶ್ವವಿದ್ಯಾಲಯಕ್ಕೆ ತಿಳಿಸುವುದರ ಜೊತೆಗೆ, ಪತ್ರ ಸ್ವೀಕರಿಸಿದ ಬಗ್ಗೆ ಸ್ವೀಕೃತಿಯನ್ನು ಕಳುಹಿಸುವಂತೆ ಸೂಚಿಸಲಾಗಿದೆ.
ಶಾಸಕ ಪುಟ್ಟಣ್ಣ ಅವರು ಪ್ರಸ್ತುತ ವಿಧಾನ ಪರಿಷತ್ತಿನ ಸದಸ್ಯರಾಗಿದ್ದು, ಅವರ ವಿಧಾನ ಪರಿಷತ್ ಸದಸ್ಯತ್ವದ ನಿವೃತ್ತಿ ದಿನಾಂಕ 11 ನವೆಂಬರ್ 2026 ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಈ ನಾಮನಿರ್ದೇಶನದ ಮೂಲಕ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆಡಳಿತಾತ್ಮಕ ಹಾಗೂ ಶೈಕ್ಷಣಿಕ ವಿಚಾರಗಳಲ್ಲಿ ವಿಧಾನ ಪರಿಷತ್ತಿನ ಪ್ರತಿನಿಧಿತ್ವಕ್ಕೆ ಅವಕಾಶ ಕಲ್ಪಿಸಲಾಗಿದೆ.
Key words: MLC, Puttanna, Nominated , KSOU Board






