Tuesday, October 13, 2026

Dasara Wishes

Happy Dasara
Home Front Page ನಾಳೆ ದೆಹಲಿಗೆ ಸಿಎಂ ಡಿಕೆ ಶಿವಕುಮಾರ್

ನಾಳೆ ದೆಹಲಿಗೆ ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಆಗಸ್ಟ್,26,2026 (www.justkannada.in):  ನಾಳೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ನಾಳೆ ಬೆಳಿಗ್ಗೆ 7 ಗಂಟೆಗೆ ಕೆಐಎಬಿಯಿಂದ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.    ಕೇಂದ್ರ ಸಚಿವರು, ಸುಪ್ರೀಂ ಕೋರ್ಟ್ ವಕೀಲರನ್ನ ಭೇಟಿಯಾಗುವ ಸಿಎಂ ಡಿಕೆ ಶಿವಕುಮಾರ್  ಕಾವೇರಿ ನೀರು ಹಂಚಿಕೆ ವಿವಾದ ಕುರಿತು ವಕೀಲರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಬಳಿಕ ಹೈಕಮಾಂಡ್ ನಾಯಕರ ಭೇಟಿ ಮಾಡಲಿರುವ ಸಿಎಂ ಡಿಕೆ ಶಿವಕುಮಾರ್ ಸಚಿವ ಬಿ.ನಾಗೇಂದ್ರ ರಾಜೀನಾಮೆ ವಿಚಾರ, ಮಹಿಳಾ ಕೋಟಾ, ಆಕಾಂಕ್ಷಿಗಳಿಗೆ ಸಚಿವ ಸ್ಥಾನ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿ ನಾಳೆ ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ನಾಳೆ ದೆಹಲಿಗೆ ಸಿಎಂ ಡಿಕೆ jk02_new jk02 new

Key words: CM, DK Shivakumar, visit, Delhi, tomorrow