ಮೈಸೂರು,ಆಗಸ್ಟ್,29,2026 (www.justkannada.in): ಅರಮನೆ ನಗರಿ ಮೈಸೂರು ಇಂದು ರಾಜಕೀಯ ಶಕ್ತಿಕೇಂದ್ರವಾಗಲಿದೆ. ಹೌದು ಇಂದು ಒಂದೇ ವೇದಿಕೆಯಲ್ಲಿ ಸಿಎಂ ಡಿಕೆ ಶಿವಕುಮಾರ್ , ಮಾಜಿ ಸಿಎಂ ಸಿದ್ದರಾಮಯ್ಯ ಕಾಣಿಸಿಕೊಳ್ಳಲಿದ್ದಾರೆ.
ಇಂದು ಚಾಮುಂಡಿಬೆಟ್ಟ ತಪ್ಪಲಿನ ಸುತ್ತೂರು ಮಠದಲ್ಲಿ ರಾಜೇಂದ್ರ ಶ್ರೀಗಳ ಜಯಂತಿ ಕಾರ್ಯಕ್ರಮ ಮತ್ತು ಮೈಸೂರು ಪತ್ರಕರ್ತರ ಸಂಘದ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಜಿ.ಪರಮೇಶ್ವರ್ ಆಗಮಿಸಲಿದ್ದಾರೆ. ಹಾಗೆಯೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಹ ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದಾರೆ.
ನಗರದ ಊಟಿ ರಸ್ತೆಯ (ಜೆಎಸ್ಎಸ್ ಕಾಲೇಜು ಹತ್ತಿರ) ಕೆಎನ್ಎಸ್ ಬಡಾವಣೆಯ ಪತ್ರಕರ್ತ ಸಂಘದ ನಿವೇಶನದಲ್ಲಿ ಜರುಗುವ ಪತ್ರಿಕಾ ದಿನಾಚರಣೆಯಲ್ಲಿ ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.
ಈ ಮೂಲಕ ಒಂದೇ ವೇದಿಕೆಯಲ್ಲಿ ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಪರಮೇಶ್ವರ್ ಕಾಣಿಸಿಕೊಳ್ಳಲಿದ್ದಾರೆ. ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸುನೀಲ್ ಬೋಸ್ ಸೇರಿ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
Key words: Mysore, political, powerhouse,CM, former CM, DCM, same stage







