Sunday, October 18, 2026

Dasara Wishes

Happy Dasara
Home Front Page ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ವಿಧಾನಸೌಧ, ಮೈಸೂರು ಅರಮನೆ..!

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ವಿಧಾನಸೌಧ, ಮೈಸೂರು ಅರಮನೆ..!

ಬೆಂಗಳೂರು,ಆಗಸ್ಟ್,29,2026 (www.justkannada.in): ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ.

ಈ ಸಂಭ್ರಮದ ಸವಿನೆನಪಿಗಾಗಿ  ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣಕನ್ನಡ  ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಭಾನುವಾರ(ಆ.30) ಸಂಜೆ 6ರಿಂದ ರಾತ್ರಿ 10ರವರೆಗೆ ಗುಲಾಬಿ ಬಣ್ಣ(ಪಿಂಕ್ ಲೈಟ್)ದ ಬೆಳಕಿನಲ್ಲಿ ಕಂಗೊಳಿಸಲಿವೆ.ಗೃಹಲಕ್ಷ್ಮಿಗೆ ಮೂರು ವರ್ಷದ vidhan

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ 2,000/- ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ನೆರವಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು ಇದೇ ಆ.30ಕ್ಕೆ  ಮೂರು ವರ್ಷಗಳನ್ನು ಪೂರೈಸಲಿದೆ.ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ Mysore Palace

ಸರ್ಕಾರವು ಗೃಹಲಕ್ಷ್ಮೀ ಯೋಜನೆ ಮೂರು ವರ್ಷಗಳನ್ನು ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಿರುವ ಗುಲಾಬಿ(PINK) ಬಣ್ಣದ ಬೆಳಕಿನ ವ್ಯವಸ್ಥೆಯನ್ನು ಮಾಡಲಾಗಿದೆ. ಇದುವರೆಗೂ ಸದರಿ ಯೋಜನೆ ಅಡಿ 1.20ಕೋಟಿ ಫಲನುಭವಿಗಳ ಖಾತೆಗೆ 76500ಕೋಟಿಗೂ  ಹೆಚ್ಚು ಹಣ ಪಾವತಿಸಲಾಗಿದೆ.ಗುಲಾಬಿ ಬಣ್ಣದ ಬೆಳಕಿನಲ್ಲಿ ವಿಧಾನಸೌಧ jk02_new jk02 new

Key words: Grihalakshmi, third Year,  Vidhana Soudha, Mysore Palace, pink lights!