Sunday, October 18, 2026

Dasara Wishes

Happy Dasara
Home DASARA-2026 ದಸರಾ ಆನೆಗಳ ವೀಕ್ಷಣೆಗೆ ಟಿಕೆಟ್ ಇಲ್ಲ: ಅರಣ್ಯ ಇಲಾಖೆ ಸ್ಪಷ್ಟನೆ

ದಸರಾ ಆನೆಗಳ ವೀಕ್ಷಣೆಗೆ ಟಿಕೆಟ್ ಇಲ್ಲ: ಅರಣ್ಯ ಇಲಾಖೆ ಸ್ಪಷ್ಟನೆ

ಮೈಸೂರು,ಆಗಸ್ಟ್,29,2026 (www.justkannada.in):  2026ರ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ದಸರಾ ಗಜಪಡೆ ಆಗಸ್ಟ್ 28ರಿಂದ ಅರಮನೆ ಆವರಣದಲ್ಲಿರುವ ದಸರಾ ಆನೆಗಳ ಶಿಬಿರದಲ್ಲಿ ಬೀಡುಬಿಟ್ಟಿದೆ.

ಈ ನಡುವೆ, ಅರಮನೆ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ದಸರಾ ಆನೆಗಳನ್ನು ವೀಕ್ಷಿಸಲು ಅರಣ್ಯ ಇಲಾಖೆ ವತಿಯಿಂದ ಇ-ಟಿಕೆಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಆನೆಗಳ ವೀಕ್ಷಣೆಗೆ ಅರಣ್ಯ ಇಲಾಖೆಯಿಂದ ಯಾವುದೇ ಟಿಕೆಟ್ ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ.ದಸರಾ ಆನೆಗಳ ವೀಕ್ಷಣೆಗೆ ಟಿಕೆಟ್ mysore dasara elephant.jpg1

ಆನೆಗಳ ವೀಕ್ಷಣೆಗೆ ಇ-ಟಿಕೆಟಿಂಗ್ ವ್ಯವಸ್ಥೆ ಕಲ್ಪಿಸುವ ವಿಚಾರ ಕೇವಲ ಚಿಂತನಾ ಹಂತದಲ್ಲಿದ್ದ ವ್ಯವಸ್ಥೆಯಾಗಿತ್ತು. ಅದನ್ನು ಜಾರಿಗೊಳಿಸಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.ದಸರಾ ಆನೆಗಳ ವೀಕ್ಷಣೆಗೆ ಟಿಕೆಟ್ ಇಲ್ಲ mysore dasara elephant

ಹೀಗಾಗಿ, ದಸರಾ ಆನೆಗಳ ವೀಕ್ಷಣೆಗೆ ಟಿಕೆಟ್ ನೀಡಲಾಗುತ್ತಿದೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿನ ಮಾಹಿತಿಯನ್ನು ಸಾರ್ವಜನಿಕರು ನಂಬಬಾರದು ಎಂದು ಅರಣ್ಯ ಇಲಾಖೆ ತಿಳಿಸಿದೆ.ಅರಣ್ಯ ಇಲಾಖೆ ಸ್ಪಷ್ಟನೆ jk02_new jk02 new

ENGLISH SUMMARY

No Tickets for Viewing Dasara Elephants

Mysuru: The Forest Department has clarified that no tickets are being issued to view Dasara elephants at the palace elephant camp.

Reports about an e-ticketing facility circulating on social media are incorrect. The proposal was only under consideration and has not been implemented, the Mysuru Wildlife Division said.

Key words: No Tickets, Viewing, Mysore, Dasara Elephants