ಬೆಂಗಳೂರು,ಸೆಪ್ಟಂಬರ್,1,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ14 ಪ್ರದೋಷ್ ಮಾಫಿ ಸಾಕ್ಷಿಗೆ ನ್ಯಾಯಾಲಯ ಸಮ್ಮತಿ ನೀಡಿರುವ ಆದೇಶವನ್ನ ಪ್ರಶ್ನಿಸಿ ಆರೋಪಿ 2 ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಎ14 ಪ್ರದೋಷ್ ಮಾಫಿ ಸಾಕ್ಷಿಗೆ ಒಪ್ಪಿಗೆ ಸೂಚಿಸಿರುವ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆರೋಪಿ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಾಳೆ ಸಾಕ್ಷ್ಯ ವಿಚಾರಣೆ ಇರುವುದರಿಂದ ಇಂದೇ ತುರ್ತು ವಿಚಾರಣೆ ನಡೆಸುವಂತೆ ನಟ ದರ್ಶನ್ ಪರ ವಕೀಲರು ಮನವಿ ಮಾಡಿದರು.
ಆದರೆ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ನಾಳೆಗೆ ನಿಗದಿ ಮಾಡಿದೆ. ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿ 14ನೇ ಆರೋಪಿ ಪ್ರದೋಷ್ ಸಲ್ಲಿಸಿದ್ದ ಅರ್ಜಿಯನ್ನ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಅಂಗೀಕರಿಸಿ ಸಾಕ್ಷ್ಯ ವಿಚಾರಣೆ ನಡೆಸುತ್ತಿದೆ.
Key words: Actor, Darshan, petition, High Court, challenging, pardon witness







