Sunday, October 18, 2026

Dasara Wishes

Happy Dasara
Home Front Page ಬಿಜೆಪಿ ಆಂತರಿಕ ಬಿಕ್ಕಟ್ಟು ಮುಚ್ಚಿಕೊಳ್ಳಲು ಪಾದಯಾತ್ರೆ: ಸಿಎಂ ಡಿ.ಕೆ ಶಿವಕುಮಾರ್

ಬಿಜೆಪಿ ಆಂತರಿಕ ಬಿಕ್ಕಟ್ಟು ಮುಚ್ಚಿಕೊಳ್ಳಲು ಪಾದಯಾತ್ರೆ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು ಸೆ 02 ,2026 (www.justkannada.in):  “ಕೆಪಿಎಸ್ಸಿ ವಿಚಾರವಾಗಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಹೋರಾಟವಲ್ಲ. ಬದಲಿಗೆ ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು ಮುಚ್ಚಿಕೊಳ್ಳುವ ಪ್ರಯತ್ನ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನ ಎಫ್ ಕೆಸಿಸಿಐ  ಕಚೇರಿಯ ಬಳಿ  ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

“ಕೆಪಿಎಸ್ಸಿ ಅಕ್ರಮದಲ್ಲಿ ಬಿಜೆಪಿ ನಾಯಕರ ಸಂಪರ್ಕದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಕುರಿತು ಗೃಹ ಸಚಿವರು ಹಾಗೂ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಲಾಗಿದೆ. ತನಿಖೆಯ ಸಂಪೂರ್ಣ ವರದಿ ಇನ್ನೂ ತಮ್ಮ ಕೈಗೆ ಬಂದಿಲ್ಲ. ಮಾಧ್ಯಮಗಳಲ್ಲಿ ಬಂದಿರುವ ಮಾಹಿತಿಯಷ್ಟೇ ತಮಗೆ ತಿಳಿದಿದೆ” ಎಂದರು.

ಕೆಪಿಎಸ್ಸಿ ಹಗರಣಗಳ ಪಿತಾಮಹ ಎನ್ ಡಿಎ

“ಕೆಪಿಎಸ್ಸಿಯಲ್ಲಿ ನಡೆದಿರುವ ಅಕ್ರಮಗಳ ಹಿಂದೆ ಯಾರ ಸಂಪರ್ಕವಿದೆ ಎಂಬುದು ತನಿಖೆಯಿಂದ ಹೊರಬರಲಿದೆ. ಕೆಪಿಎಸ್ಸಿ ಅಧ್ಯಕ್ಷರನ್ನು ನೇಮಿಸಿದವರು ಯಾರು?  ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದವರು ಯಾರೆಂಬುದು ಕೂಡ ಪರಿಶೀಲನೆಯಾಗಬೇಕು” ಎಂದು ಹೇಳಿದರು.

“ಕೆಪಿಎಸ್ ಸಿ ಹಗರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಎನ್ ಡಿಎ ಮುಖಂಡರ ವಿರುದ್ಧ ಗೃಹ ಸಚಿವರ ಬಳಿ ಇರುವ ಮಾಹಿತಿಯನ್ನು ಶೀಘ್ರದಲ್ಲೇ ಸಂಪೂರ್ಣವಾಗಿ ಬಹಿರಂಗಪಡಿಸಲಾಗುವುದು” ಎಂದರು.

ರಾಜ್ಯಪಾಲರ ವರದಿ ಆಧರಿಸಿ ಕ್ರಮ

“ರಾಜ್ಯಪಾಲರಿಂದ ಬಂದಿರುವ ವರದಿ ಹಾಗೂ ತನಿಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮೋದನೆ ನೀಡಲಾಗಿದೆ. ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ವಿಪಕ್ಷಗಳಿಗೆ ನಾಚಿಕೆಯಾಗಬೇಕು

“ಅವರ ಪಾದಯಾತ್ರೆ ನಿಜವಾದ ಹೋರಾಟವಲ್ಲ. ಬಿಜೆಪಿ ಸಂಘಟನೆಯೊಳಗಿನ ಬಿಕ್ಕಟ್ಟನ್ನು ಮುಚ್ಚಿಕೊಳ್ಳುವ ಪ್ರಯತ್ನ. ಅವರು ಪಾದಯಾತ್ರೆ ಮಾಡಲಿ. ಅದಕ್ಕೆ ನನ್ನ ಯಾತ್ರೆ ಏನು ಎಂಬುದನ್ನು ಸದ್ಯಕ್ಕೆ ಹೇಳುವುದಿಲ್ಲ. ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ” ಎಂದು ಹೇಳಿದರು.                                                                                                                                                                                                                                                    “ಅವರು ಹೇಳಿದ್ದನ್ನು ಕೇಳಿಕೊಂಡು, ಅವರಿಗೆ ನೀಡಬೇಕಾದ ಗೌರವವನ್ನು ನೀಡುತ್ತಲೇ ಬಂದಿದ್ದೇವೆ. ಆದರೆ ನಮ್ಮ ಗೌರವವನ್ನು ಸ್ವೀಕರಿಸಲು ಅವರು ಸಿದ್ಧರಿಲ್ಲ ಎಂದಾದರೆ, ಅವರ ರಾಜಕಾರಣ ಅವರು ಮಾಡಲಿ; ನಮ್ಮ ರಾಜಕಾರಣ ನಾವು ಮಾಡುತ್ತೇವೆ” ಎಂದರು.

“ಕೆಪಿಎಸ್ ಸಿ ಅಧ್ಯಕ್ಷರನ್ನು ನೇಮಕ ಮಾಡಿದ್ದು ಬಿಜೆಪಿ. ಅವರೊಂದಿಗೆ ಸಂಪರ್ಕ ಹೊಂದಿದ್ದವರು ಯಾರು ಎಂಬುದರ ಬಗ್ಗೆಯೂ ಪರಿಶೀಲನೆ ನಡೆಯಬೇಕು. ಅವರನ್ನು ಅಮಾನತು ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೇ ಹಿಂದೆ ಪತ್ರ ಬರೆದಿದ್ದರು” ಎಂದು ಹೇಳಿದರು.

ಜನರ ಸಮಸ್ಯೆ ಬಗೆಹರಿಸುವುದು ಮುಖ್ಯ

“ಬಡವರು, ರೈತರು, ಕಾರ್ಮಿಕರು ಹಾಗೂ ಬರಗಾಲದಿಂದ ಸಂಕಷ್ಟಕ್ಕೊಳಗಾದ ಜನರಿಗೆ ನೆರವಾಗುವುದು ನಮ್ಮ ಜವಾಬ್ದಾರಿ. ಅಭಿವೃದ್ಧಿಯ ಕೆಲಸಗಳನ್ನು ಬದಿಗೊತ್ತಿ ರಾಜಕೀಯ ಆರೋಪ, ಪ್ರತ್ಯಾರೋಪಗಳಲ್ಲಿ ಸಮಯ ವ್ಯರ್ಥ ಮಾಡಲು ನಾವು ಸಿದ್ಧರಿಲ್ಲ” ಎಂದು ಸ್ಪಷ್ಟಪಡಿಸಿದರು.

ರಾಹುಲ್ ಗಾಂಧಿ ಸಂದೇಶ: ಪ್ರತಿಯೊಬ್ಬರಿಗೂ ಮಾತನಾಡುವ ಹಕ್ಕು

“ರಾಹುಲ್ ಗಾಂಧಿ ಅವರು ಪ್ರತಿಯೊಬ್ಬರಿಗೂ ಮಾತನಾಡುವ ಹಕ್ಕು, ಧ್ವನಿ ಎತ್ತುವ ಹಕ್ಕು ಮತ್ತು ಸಮಾಜದ ಎಲ್ಲ ವರ್ಗಗಳ ಪರ ನಿಲ್ಲುವ ಹಕ್ಕಿದೆ ಎಂಬ ಸಂದೇಶ ನೀಡುತ್ತಿದ್ದಾರೆ. ಇಂತಹ ಮನೋಭಾವವೇ ಪ್ರಜಾಪ್ರಭುತ್ವದ ಮೂಲ ಆಶಯ ಬಲಪಡಿಸುತ್ತದೆ” ಎಂದು ಹೇಳಿದರು.ಬಿಜೆಪಿ ಆಂತರಿಕ ಬಿಕ್ಕಟ್ಟು jk02_new jk02 new

“ಸಮಾಜದ ಎಲ್ಲ ವರ್ಗಗಳ ಧ್ವನಿಗೂ ಅವಕಾಶ ನೀಡುವುದು, ಅವರ ಪರ ನಿಲ್ಲುವುದು ಹಾಗೂ ಹಕ್ಕುಗಳಿಗೆ ಧ್ವನಿ ಎತ್ತುವುದು ಪ್ರಜಾಪ್ರಭುತ್ವದ ಪ್ರಮುಖ ಅಂಶ” ಎಂದು ಅಭಿಪ್ರಾಯಪಟ್ಟರು.

Key words: BJP, Padayatra, cover up, internal crisis, CM DK Shivakumar