ವಿಜಯನಗರ, ಸೆಪ್ಟೆಂಬರ್ 5,2026 (www.justkannada.in): ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ ತಲುಪಿಸುವ ‘ಪ್ರಜಾಸೇವಾ ಅಭಿಯಾನಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿದರು.
‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲು ಸಹಕಾರ’ ಎಂಬ ಉದ್ದೇಶದೊಂದಿಗೆ ರೂಪಿಸಿರುವ ಕಾರ್ಯಕ್ರಮಕ್ಕೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹಲವು ಕಾಂಗ್ರೆಸ್ ಗಣ್ಯರು ಮುಖ್ಯಮಂತ್ರಿಗೆ ಸಾಥ್ ನೀಡಿದರು.
ಎಲ್ಲಾ ಜಿಲ್ಲೆಗಳಲ್ಲೂ ಅಯಾ ಉಸ್ತುವಾರಿ ಸಚಿವರು ಪ್ರಜಾಸೇವೆಗೆ ಚಾಲನೆ ನೀಡಲಿದ್ದಾರೆ. ಸರ್ಕಾರದ ಸೇವೆಯನ್ನು ಜನರ ಮನೆಯ ಬಾಗಿಲಿಗೆ ತಲುಪಿಸುವ ಯೋಜನೆ ಇದಾಗಿದೆ. ಪ್ರತಿತಿಂಗಳ ಮೊದಲ ಶನಿವಾರ ಜಿಲ್ಲೆ ತಾಲ್ಲೂಕು ಹೋಬಳಿ ಮಟ್ಟದಲ್ಲಿ ಸಚಿವರು ಶಾಸಕರ ಅದ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಜನರ ಅಹವಾಲು ಸ್ವೀಕರಿಸಲಿದ್ದಾರೆ .
Key words: CM DK Shivakumar, launches, public service, campaign







