Monday, September 7, 2026

BDA Apartments

Home Front Page ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ JDS ಶಾಸಕ ಏಕಾಂಗಿ ಪ್ರತಿಭಟನೆ

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ JDS ಶಾಸಕ ಏಕಾಂಗಿ ಪ್ರತಿಭಟನೆ

ಬೆಂಗಳೂರು, ಸೆಪ್ಟೆಂಬರ್, 7,2026 (www.justkannada.in): ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಲು ಆಗ್ರಹಿಸಿದರು.

ಗುರುಮಠಕಲ್ ಮತ್ತು ಯಾದಗಿರಿ ಪ್ರದೇಶಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲು ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಶಾಸಕ ಶರಣಗೌಡ ಕಂದಕೂರ್  ಅವರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಕುಳಿತು ಪ್ರತಿಭಟನೆ ನಡೆಸಿದರು.

ಸರ್ಕಾರ ಬರಪಟ್ಟಿ ಬಿಡುಗಡೆ ಮಾಡಿದಾಗ ಗುರುಮಠಕಲ್ ಮತ್ತು ಯಾದಗಿರಿ ಜಿಲ್ಲೆಗಳನ್ನು ಕೈಬಿಟ್ಟಿತ್ತು. ಈ ನಿರ್ಧಾರದಿಂದಾಗಿ ಈ ಪ್ರದೇಶಗಳ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಬರ ತಾಲೂಕು ಘೋಷಣೆಯಿಂದ ವಂಚಿತರಾದ ರೈತರಿಗೆ ಕೂಡಲೇ ಪರಿಹಾರ ನೀಡಬೇಕು ಮತ್ತು ಈ ಪ್ರದೇಶಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು ಎಂದು ಶಾಸಕ ಶರಣಗೌಡ ಆಗ್ರಹಿಸಿದರು.

Key words: JDS MLA, protests, alone, Vidhana Soudha