ಬಳ್ಳಾರಿ,ಸೆಪ್ಟಂಬರ್,8,2026 (www.justkannada.in): ವಾಲ್ಮೀಕಿ ಅಭಿವೃದ್ದಿ ನಿಗಮದ ಅಕ್ರಮ ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ ಅಂತಿಮ ಹಂತಕ್ಕೆ ತಲುಪಿದ್ದು ಸೆಪ್ಟಂಬರ್ 10 ರಂದು ಸಮಾರೋಪ ಸಮಾರಂಭವನ್ನ ಆಯೋಜಿಸಲು ನಿರ್ಧರಿಸಿದೆ.
ಸೆಪ್ಟಂಬರ್ 10 ರಂದು ಬಳ್ಳಾರಿಯ ಮುನ್ಸಿಪಲ್ ಶಾಲಾ ಮೈದಾನದಲ್ಲಿ ಬಳ್ಳಾರಿ ಚಲೋ ಪಾದಯಾತ್ರೆಯ ಸಮಾರೋಪ ಸಮಾವೇಶ ಮಾಡಲು ಬಿಜೆಪಿ ತೀರ್ಮಾನಿಸಿದ್ದು ಆದರೆ ಇದಕ್ಕೆ ಶಾಲಾ ಶಿಕ್ಷಣ ಇಲಾಖೆ ಅನುಮತಿ ನಿರಾಕರಿಸಿದೆ.
ಹೌದು, ಮುನ್ಸಿಪಲ್ ಶಾಲಾ ಮೈದಾನದಲ್ಲಿ ಪಾದಯಾತ್ರೆಯ ಸಮಾರೋಪ ಸಮಾವೇಶ ಮಾಡಲು ಅನುಮತಿ ಕೋರಿ ಬಿಜೆಪಿಯು ಬಳ್ಳಾರಿಯ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಪತ್ರಕ್ಕೆ ಮರು ಉತ್ತರ ನೀಡಿರುವ ಅದಿಕಾರಿಗಳು ಸಮಾವೇಶಕ್ಕೆ ಅನುಮತಿ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ರಾಯಚೂರಿನ ಲಿಂಗಸೂಗೂರಿನಿಂದ ಬಳ್ಳಾರಿವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪಾದಯಾತ್ರೆ ನಡೆಸುತ್ತಿದೆ.
Key words: Permission, denied, BJP, convention, Bellary Chalo






