ಬೆಂಗಳೂರು,ಸೆಪ್ಟಂಬರ್,12,2026 (www.justkannada.in): ಸೆಪ್ಟಂಬರ್ 14 ರಂದು ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಅಂದು ಪ್ರಾಣಿವಧೆ, ಮಾಂಸ ಮಾರಾಟಕ್ಕೆ ನಿಷೇಧ ವಿಧಿಸಿ ಜಿಬಿಎ ಉಪ ನಿರ್ದೇಶಕರು (ಪಶುಪಾಲನೆ) ಆದೇಶ ಹೊರಡಿಸಿದ್ದಾರೆ.
ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಜಿಬಿಎ ವ್ಯಾಪ್ತಿಯ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವುದನ್ನು ಹಾಗೂ ಮಾಂಸದ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಬ್ಬದ ದಿನದಂದು ಸಾರ್ವಜನಿಕರು ಹಾಗೂ ವ್ಯಾಪಾರಿಗಳು ನಿಷೇಧದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಒಂದು ವೇಳೆ ಆದೇಶ ಉಲ್ಲಂಘಿಸಿ ಅಕ್ರಮವಾಗಿ ಪ್ರಾಣಿವಧೆ ಅಥವಾ ಮಾಂಸ ಮಾರಾಟ ಮಾಡಿದ್ದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Key words: Ban, animal slaughter, meat sales, September 14, Bengaluru






