ಬೆಂಗಳೂರು,ಸೆಪ್ಟಂಬರ್,14,2026 (www.justkannada.in): ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ನೂರು ದಿನದ ಸಂಭ್ರಮದ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಗೆ ಆಹ್ವಾನ ನೀಡದ ಆರೋಪ ಹಿನ್ನೆಲೆಯಲ್ಲಿ ಈ ಬಗ್ಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಮುಖ್ಯಮಂತ್ರಿಗಿಂತ ಬಿ.ಕೆ ಹರಿಪ್ರಸಾದ್ ಸುಪ್ರೀಂ. ನಮ್ಮ ಕಾಂಗ್ರೆಸ್ ರಾಜ್ಯಾಧ್ಯಕ್ಷರು ಸಿಎಂಗಿಂತ ಸುಪ್ರೀಂ ಆಗಿದ್ದಾರೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷರನ್ನ ಗೌರವಿಸಬೇಕಾಗಿದಿದ್ದು ಎಲ್ಲರ ಕರ್ತವ್ಯ ಎಂದು ತಿಳಿಸಿದರು.
ಸಿಎಂ ಡಿಕೆ ಶಿವಕುಮಾರ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ಕಳೆದ ಎರಡ್ಮೂರು ದಿನಗಳ ಹಿಂದೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸರ್ಕಾರದ ಶತಕದ ಸಂಭ್ರಮವನ್ನು ಆಚರಿಸಲಾಗಿತ್ತು. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಆಹ್ವಾನ ನೀಡಿಲ್ಲ. ಹೀಗಾಗಿ ಅವರು ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. 
Key words: KPCC President, B.K. Hariprasad, supreme, CM, Minister M.B. Patil







