Tuesday, September 15, 2026

BDA Apartments

Man BDA JK_Adv BDA Adv
Home Crime ಹುಲಿ ದಾಳಿಗೆ ವ್ಯಕ್ತಿ ಬಲಿ: ಸ್ಥಳಕ್ಕೆ ಬಾರದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಹುಲಿ ದಾಳಿಗೆ ವ್ಯಕ್ತಿ ಬಲಿ: ಸ್ಥಳಕ್ಕೆ ಬಾರದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಚಾಮರಾಜನಗರ,ಸೆಪ್ಟಂಬರ್,15,2026 (www.justkannada.in):  ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಾಮರಾಜನಗರ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಸವಣ್ಣ (65) ಮೃತಪಟ್ಟವರು. ಎಂದಿನಂತೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಹುಲಿ ದಾಳಿ ನಡೆಸಿದ್ದು, ಬಸವಣ್ಣ ಅವರನ್ನು ಎಳೆದೊಯ್ದಿದೆ ಎನ್ನಲಾಗಿದೆ. ಹುಲಿ ಅವರ ದೇಹದ ಅರ್ಧ ಭಾಗವನ್ನು ತಿಂದು, ಬಳಿಕ ಸಮೀಪದಲ್ಲಿದ್ದ ಕಬ್ಬಿನ ತೋಟದೊಳಕ್ಕೆ ಎಳೆದೊಯ್ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.Man tiger

ಸಂಜೆಯಾದರೂ ಬಸವಣ್ಣ ಅವರು ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಜಮೀನಿಗೆ ತೆರಳಿ ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳು

ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬಂದಿಲ್ಲ ಎಂದು ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.Death tiger attack

ಘಟನೆ ನಡೆದಿರುವುದು ತಿಳಿದ ಬಳಿಕವೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದಿರುವುದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ. ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರೂ, ಅವರ ಮೊಬೈಲ್ ಸ್ವಿಚ್‌ಆಫ್ ಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.tiger attack jk02_new jk02 new

ಹುಲಿ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಗಂಭೀರ ಘಟನೆ ನಡೆದಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದಿರುವುದು ಖಂಡನೀಯ. ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಹುಲಿ ಸೆರೆಗೆ ಕ್ರಮ ಕೈಗೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Key words: Man, Death, tiger attack, Villagers, outraged, forest officials

English Summary
Title

Tragic Tiger Attack Kills 60-Year-Old Farmer in Chamarajanagar

Short Description
A tragic tiger attack in Chamarajanagar district has claimed the life of a 60-year-old farmer. The victim, identified as Basavanna, was killed on the spot after a tiger pounced on him while he was cutting grass in his agricultural field at Badagalapura village. This fatal encounter has triggered severe anxiety and anger among local residents, who are demanding immediate safety intervention from the forest department. Human-wildlife conflict remains a growing concern for communities living near the forest fringes in Karnataka.
Keywords
Man, Death, tiger attack, Villagers, outraged, forest officials