ಬೆಂಗಳೂರು, ಸೆಪ್ಟೆಂಬರ್, 15,2026 (www.justkannada.in): ವಂದೇ ಮಾತರಂ ಗೀತೆಯ ಚರಣ ಕಡಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ.
ವಂದೇ ಮಾತರಂ ಎರಡು ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರ ತೀರ್ಮಾಸರ್ಕಾರದ ಕ್ರಮ ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ವಂದೇ ಮಾತರಂ ಗೀತೆ ಚರಣ ಕಡಿತಗೊಳಿಸುವ ಕಾನೂನು ವ್ಯಾಪ್ತಿ ಸರ್ಕಾರಕ್ಕಿಲ್ಲ. ಹೀಗಾಗಿ ಸೆಪ್ಟಂಬರ್ 8ರ ಸರ್ಕಾರದ ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಿದ್ದಾರೆ. 
ವಂದೇ ಮಾತರಂ ಎರಡು ಚರಣ ಮಾತ್ರ ಹಾಡುವ ನಿರ್ಣಯವನ್ನ ಸರ್ಕಾರ ತೆಗೆದುಕೊಂಡಿತ್ತು. ಸಚಿವ ಸಂಪುಟದ ನಿರ್ಣಯ ಆಧರಿಸಿ ರಾಜ್ಯಸರ್ಕಾರ ಈ ಬಗ್ಗೆ ಆದೇಶಿಸಿತ್ತು. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ, ರಾಜ್ಯಪಾಲರ ಕಾರ್ಯಕ್ರಮಗಳನ್ನು ಹೊರತುಪಡಿಸಿ ಉಳಿದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರ ತೀರ್ಮಾನಿಸಿತ್ತು.






