ಬೆಂಗಳೂರು,ಸೆಪ್ಟಂಬರ್,18,2026 (www.justkannada.in): ಬೆಂಗಳೂರು ನಗರಾಭಿವೃದ್ದಿ ಇಲಾಖೆ ಸಚಿವ ಜನಸಾಮಾನ್ಯರಿಗೆ ಸಂಬಂಧಿಸಿದ ವಿಷಯದಲ್ಲಿ ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳಿಗೆ ಅಗ್ಗಾಗ್ಗೆ ತರಾಟೆ ತೆಗೆದುಕೊಳ್ಳುತ್ತಲೇ ಇರುತ್ತಾರೆ. ಈ ಮಧ್ಯೆ ಇದೀಗ ಮತ್ತೆ ಕಸ ಸರಿಯಾಗಿ ವಿಲೇವಾರಿಯಾಗದ ಹಿನ್ನೆಲೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ನಗರದ ಹೆಬ್ಬಾಳದ ಫ್ಲೈಓವರ್ ಬಳಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿದೆಯಾ ಇಲ್ಲವಾ ಎಂದು ಸಚಿವ ಕೃಷ್ಣಭೈರೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಫ್ಲೈಓವರ್ ಬಳಿ ಕಸ ಹಾಗೆಯೇ ಇತ್ತು.
ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಸಚಿವ ಕೃಷ್ಣ ಭೈರೇಗೌಡರು, ನೀವು ಕೆಲಸ ಮಾಡೋದು ಜನರಿಗಾಗಾ? ಅಥವಾ ಕಾಂಟ್ರಾಕ್ಟರ್ ಗಳಿಗಾ? ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನದ ಭಾಗವಾಗಿ ಸ್ವಚ್ಛತೆ ನಡೆಸಲಾಗುತ್ತಿದೆ. ಸರಿಯಾಗಿ ಕಸ ವಿಲೇವಾರಿ ಮಾಡುವಂತೆ ತಾಕೀತು ಮಾಡಿದರು.







