ಬೆಂಗಳೂರು,ಸೆಪ್ಟಂಬರ್,21,2026 (www.justkannada.in) ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದ್ದು ಹಲವು ವಿಚಾರಗಳು ಚರ್ಚೆಗೆ ಬರಲಿವೆ.
ವಿಶೇಷ ಅಧಿವೇಶನದಲ್ಲಿ ಬರ ಪರಿಸ್ಥಿತಿ ಹಾಗೂ ಕಸ್ತೂರಿ ರಂಗನ್ ವರದಿ ವಿಚಾರಗಳು ಪ್ರಮುಖ ಅಜೆಂಡಾವಾಗಿದ್ದು. ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಮುಗಿಬೀಳಲು ಸಜ್ಜಾಗಿದೆ. ,ವಿಪಕ್ಷಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ಕೂಡ ಅಸ್ತ್ರಗಳನ್ನು ಸಿದ್ಧಪಡಿಸಿಕೊಂಡಿದೆ.
ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು ಬೆಳೆಹಾನಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಲಿದ್ದಾರೆ. ಕಳೆದ ತಿಂಗಳು ಮುಂಗಾರು ಅಧಿವೇಶನದಲ್ಲಿ 11 ದಿನಗಳ ಗದ್ದಲದಲ್ಲೇ ಮುಗಿದಿತ್ತು. ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಚಿವರಾಗಿದ್ದ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದು ಪ್ರತಿದಿನ ಧರಣಿ, ಪ್ರತಿಭಟನೆ ನಡೆಸಿದ್ದರಿಂದ ಕಲಾಪಕ್ಕೆ ಸರಿಯಾಗಿ ನಡೆದಿರಲಿಲ್ಲ. ಬರ ಸೇರಿದಂತೆ ಯಾವುದೇ ಸಮಸ್ಯೆಗಳ ಬಗ್ಗೆ ಚರ್ಚೆಯಾಗದ ಹಿನ್ನೆಲೆಯಲ್ಲಿ ಇದೀಗ ಇಂದಿನಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಲಾಗಿದೆ. ಬೆಳಗ್ಗೆ 11 ಗಂಟೆಗೆ ಸದನ ಆರಂಭವಾಗಲಿದ್ದು, ಹಲವು ಪ್ರಮುಖ ವಿಚಾರಗಳು ಚರ್ಚೆಗೆ ಬರಲಿವೆ.







