Monday, September 21, 2026

BDA Apartments

Journalists BDA JK_Adv BDA Adv
Home Front Page ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಪತ್ರಕರ್ತರಿಂದ ಒತ್ತಾಯ

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಪತ್ರಕರ್ತರಿಂದ ಒತ್ತಾಯ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in):  ರಾಜ್ಯದ ಪೌರಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪೌರಕಾರ್ಮಿಕರಿಗಾಗಿ ಪತ್ರಕರ್ತರು ಬಳಗ ಒತ್ತಾಯಿಸಿದೆ.

ಹಿರಿಯ ಪತ್ರಕರ್ತರಾದ ಸುಭಾಷ್ ಹೂಗಾರ್, ಧರಣೀಶ್ ಬೂಕನಕೆರೆ, ಎನ್. ರವಿಕುಮಾರ್ ಟೆಲೆಕ್ಸ್, ಮಾರುತಿ ಪಾವಗಡ, ಟಿ. ಗುರುರಾಜ್, ಮಹಾಂತೇಶ ಹಿರೇಮಠ ಹಾಗೂ ಸೋಮಶೇಖರ್ ಕವಚೂರು ನೇತೃತ್ವದ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ಹಾಗೂ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ತಕ್ಷಣ ಖಾಯಂಗೊಳಿಸಬೇಕು, ಸರ್ಕಾರಿ ನೌಕರರ ಸಮಾನ ಸ್ಥಾನಮಾನ ನೀಡಬೇಕು ಹಾಗೂ ಪ್ರತ್ಯೇಕ ವೇತನ ಮಂಡಳಿ ರಚಿಸಿ ವೇತನ ಹೆಚ್ಚಿಸಬೇಕು ಎಂದು ಮನವಿ ಮಾಡಲಾಗಿದೆ.

ಪೌರಕಾರ್ಮಿಕರಿಗೆ ನಿಯಮಿತ ಆರೋಗ್ಯ ತಪಾಸಣೆ, ನಗದುರಹಿತ ಆರೋಗ್ಯ ಚಿಕಿತ್ಸಾ ಯೋಜನೆ, ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಧನ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಬೇಕು. ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ತ್ಯಾಜ್ಯ ವಿಲೇವಾರಿ ವಾಹನಗಳ ಚಾಲಕರು, ಸಹಾಯಕರು ಹಾಗೂ ಆಪರೇಟರ್ ‌ಗಳನ್ನೂ ಪೌರಕಾರ್ಮಿಕರೆಂದು ಪರಿಗಣಿಸಿ ಖಾಯಂಗೊಳಿಸಬೇಕು ಎಂದು ಆಗ್ರಹಿಸಲಾಗಿದೆ.Journalists journalist

ಸೇವೆಯಲ್ಲಿರುವಾಗ ಮೃತಪಟ್ಟ ಪೌರಕಾರ್ಮಿಕರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಬೇಕು ಹಾಗೂ ಪೌರಕಾರ್ಮಿಕರ ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳ ಅಧ್ಯಯನಕ್ಕೆ ಸಮಿತಿ ರಚಿಸಿ ಮೂರು ತಿಂಗಳೊಳಗೆ ವರದಿ ಪಡೆದು ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಒತ್ತಾಯಿಸಿದೆ.urge jk02_new jk02 new

Key words: Journalists, urge, fulfillment, civic workers, demands

English Summary
Title

Journalists Urge Government to Fulfill Civic Workers' Demands

Short Description
Journalist unions urge municipal authorities to immediately fulfill the fair demands of essential civic workers and sanitation staff. Media bodies continue to highlight critical labor grievances, including the regularisation of employment, revised minimum wages, and robust social security benefits. Journalists stress that protecting labor rights, providing essential safety equipment, and guaranteeing workplace dignity are crucial for a functional municipal system. By amplifying these labor protests and structural worker demands, the press pushes for immediate state action to safeguard the welfare of the frontline civic labor force.
Keywords
Journalists, urge, fulfillment, civic workers, demands