ಬೆಂಗಳೂರು, ಸೆಪ್ಟೆಂಬರ್, 22,2026 (www.justkannada.in): ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಗೆ ಪತ್ರ ಬರೆದಿದ್ದಾರೆ.
ಈ ಕುರಿತು ಸಿಎಂ ಡಿಕೆ ಶಿವಕುಮಾರ್ ಅವರಿಗೆ ನಾಲ್ಕು ಪುಟಗಳ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಸರ್ಕಾರದ ನಿರ್ಧಾರವು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ. ವಂದೇ ಮಾತರಂನ ಅಧಿಕೃತ ಆವೃತ್ತಿಯನ್ನು ಕೇಂದ್ರ ಗೃಹ ಸಚಿವಾಲಯ ನಿಗದಿಪಡಿಸಿದೆ. ರಾಷ್ಟ್ರೀಯ ಗೀತೆ ಹಾಗೂ ರಾಷ್ಟ್ರಗಾನದ ಕುರಿತು ನಿರ್ದಿಷ್ಟ ಆದೇಶಗಳನ್ನು ಹೊರಡಿಸಲಾಗಿದ್ದು, ರಾಜ್ಯಗಳೂ ಕೇಂದ್ರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಸಂವಿಧಾನಾತ್ಮಕ ಅಂಶಗಳು ಹಾಗೂ ಕೇಂದ್ರ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ವಂದೇ ಮಾತರಂ ಕುರಿತ ರಾಜ್ಯ ಸರ್ಕಾರದ ಆದೇಶವನ್ನು ಮರುಪರಿಶೀಲಿಸುವಂತೆ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಸಾಮೂಹಿಕ ಗಾಯನ ಸಂದರ್ಭದಲ್ಲೂ ವಂದೇ ಮಾತರಂನ ಅಧಿಕೃತ ಆವೃತ್ತಿಯನ್ನೇ ಹಾಡಬೇಕು ಎಂದು ಕೇಂದ್ರದ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. ರಾಜ್ಯ ಸರ್ಕಾರದ ಕಾರ್ಯಕ್ರಮಗಳಿಗೆ ಪ್ರತ್ಯೇಕವಾಗಿ ಸಂಕ್ಷಿಪ್ತ ಅಥವಾ ಬದಲಾದ ಆವೃತ್ತಿಯನ್ನು ನಿಗದಿಪಡಿಸಲು ಅವಕಾಶವಿಲ್ಲ ಎಂದು ರಾಜ್ಯಪಾಲರು ಪತ್ರದಲ್ಲಿ ಹೇಳಿದ್ದಾರೆ.
Key words: Vande Mataram, controversy, Governor, letter, CM DK Shivakumar






