Thursday, September 24, 2026

BDA Apartments

ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಧಿಕೃತ ಉಚ್ಚಾಟನೆ BDA JK_Adv BDA Adv
Home Crime ಅಕ್ರಮ ಸಂಬಂಧದ ಆರೋಪ: ಗೃಹಿಣಿ ಆತ್ಮಹತ್ಯೆ

ಅಕ್ರಮ ಸಂಬಂಧದ ಆರೋಪ: ಗೃಹಿಣಿ ಆತ್ಮಹತ್ಯೆ

ಮೈಸೂರು,ಸೆಪ್ಟಂಬರ್‌,24,2026 (www.justkannada.in):  ಅಕ್ರಮ ಸಂಬಂಧದ ವಿಚಾರವಾಗಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ವಿಷದ ಗುಳಿಗೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಗ್ರಾಮದ ಕಾಂತಾ ಎಂಬವರ ಪತ್ನಿ ಎಂ.ಆರ್. ಸಂಧ್ಯಾ ಎಂದು ಗುರುತಿಸಲಾಗಿದೆ. ಇದೇ ಗ್ರಾಮದ ವಿಕಾಸ್ ಎಂಬಾತನೊಂದಿಗೆ ಸಂಧ್ಯಾ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದ್ದು, ಮೊಬೈಲ್‌ ನಲ್ಲಿದ್ದ ಮೆಸೇಜ್‌ಗಳು ಹಾಗೂ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.Accused illicit relationship housewife commits

ಈ ಹಿನ್ನೆಲೆಯಲ್ಲಿ ಸಂಧ್ಯಾ ವಿಷದ ಗುಳಿಗೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕಾಸ್, ಕುಮಾರ್ ಹಾಗೂ ವಸಂತ ಎಂಬವರ ವಿರುದ್ಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಘಟನೆ ಬಳಿಕ ವಿಕಾಸ್ ಪರಾರಿಯಾಗಿದ್ದು, ಆತನಿಗಾಗಿ ಬಿಳಿಕೆರೆ ಠಾಣೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ್ದರೂ, ಕುಟುಂಬಸ್ಥರು ಮತ್ತು ಗ್ರಾಮಸ್ಥರು ಶವದ ಪಂಚನಾಮೆ ಹಾಗೂ ಮರಣೋತ್ತರ ಪರೀಕ್ಷೆಗೆ ಸಹಕರಿಸಲು ನಿರಾಕರಿಸಿದ್ದಾರೆ.

ಆರೋಪಿ ಬಂಧಿಸುವವರೆಗೆ ಶವಸಂಸ್ಕಾರ ಮಾಡುವುದಿಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದು, ಶವದ ಪಂಚನಾಮೆಗೂ ಗ್ರಾಮದ ಯಾರೊಬ್ಬರೂ ಹಾಜರಾಗುವುದಿಲ್ಲ ಎಂದು ಬಿಗಿಪಟ್ಟು ಹಿಡಿದಿದ್ದಾರೆ.Accused illicit relationship housewife commits jk02

ಪ್ರಕರಣದ ತನಿಖೆಯನ್ನು ಬಿಳಿಕೆರೆ ಠಾಣೆ ಪೊಲೀಸರು ಮುಂದುವರಿಸಿದ್ದು, ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

Accused, illicit relationship, housewife, commits suicide, mysore

English Summary
Title

Accused of illicit relationship: housewife commits suicide

Short Description
A housewife committed suicide by consuming poison tablets in Lakkanakoppalu village, Hunsur taluk, Mysuru district, following allegations that she was being blackmailed over an illicit relationship.The deceased has been identified as M.R. Sandhya, the wife of a villager named Kanta. Her family has alleged that she was involved in an illicit relationship with a man named Vikas from the same village and was being blackmailed using messages and videos found on her mobile phone.