Wednesday, August 26, 2026

BDA Apartments

Home Front Page ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣಾದ ಹಿನ್ನೆಲೆ: ಪ್ರತಿಭಟನೆ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾದ ವೈದ್ಯರು….

ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣಾದ ಹಿನ್ನೆಲೆ: ಪ್ರತಿಭಟನೆ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾದ ವೈದ್ಯರು….

ಬೆಂಗಳೂರು,ನ,8,2019(www.justkannada.in):  ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರವೇ ಕಾರ್ಯಕರ್ತರು ಪೊಲೀಸರ ಮುಂದೆ ಶರಣಾದ ಹಿನ್ನೆಲೆ ಆಸ್ಪತ್ರೆಯ ವೈದ್ಯರು  ಪ್ರತಿಭಟನೆ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಕರವೇ ಕಾರ್ಯಕರ್ತರು ಆಸ್ಪತ್ರೆಗೆ ನುಗ್ಗಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮಿಂಟೋ ಕಣ್ಣಿನ ಆಸ್ಪತ್ರೆಯ ವೈದ್ಯರು  ಇಂದು ರಾಜ್ಯಾಧ್ಯಂತ ಒಪಿಡಿ ಬಂದ್ ಮಾಡಿ ಪ್ರತಿಭಟನೆಯಲ್ಲಿ ನಡೆಸುತ್ತಿದ್ದರು. ಕರವೇ ಕಾರ್ಯಕರ್ತರ ವಿರುದ್ದ ದೂರು ದಾಖಲಾಗಿತ್ತು. ಈ ಹಿನ್ನೆಲೆ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಪ್ರಕರಣ  ಸಂಬಂಧ ಅಶ್ವಿನಿಗೌಡ ಸೇರಿ 13 ಮಂದಿ ಕರವೇ ಕಾರ್ಯಕರ್ತರು ವಿವಿಪುರಂ ಠಾಣಾ ಪೊಲೀಸರಿಗೆ ಶರಣಾಗಿದ್ದಾರೆ. ಈ ಹಿನ್ನೆಲೆ ವೈದ್ಯರು ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮಿಂಟೋ ಆಸ್ಪತ್ರೆ, ವಿಕ್ಟೋರಿಯಾ, ವಾಣಿ ವಿಲಾಸ್ ಆಸ್ಪತ್ರೆಯ ಹೊರರೋಗಿ ವಿಭಾಗಗಳು ತೆರೆದಿವೆ.

Key words: surrender –karave activitist-minto hospital- Doctors – leave – protest- duty