Tuesday, September 29, 2026

BDA Apartments

Karnataka Financial Crisis BJP Demands BDA JK_Adv BDA Adv
Home Front Page ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಿ- ಸಿಎಂ ಡಿಕೆಶಿಗೆ ಬಿವೈ ವಿಜಯೇಂದ್ರ ಆಗ್ರಹ

ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಿ- ಸಿಎಂ ಡಿಕೆಶಿಗೆ ಬಿವೈ ವಿಜಯೇಂದ್ರ ಆಗ್ರಹ

ಬೆಂಗಳೂರು,ಸೆಪ್ಟಂಬರ್,29,2026 (www.justkannada.in): ಆರ್ಥಿಕ ಇಲಾಖೆ ನೀಡಿರುವ ಪತ್ರ ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಆದ್ದರಿಂದ ಹಣಕಾಸು ಸಚಿವರೂ ಆಗಿರುವ ಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೈಜ ಹಣಕಾಸು ಪರಿಸ್ಥಿತಿ ಕುರಿತು ತಕ್ಷಣ ಶ್ವೇತಪತ್ರ ಹೊರಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ನಾಯಕರು ಗ್ಯಾರಂಟಿಗಳ ಮೂಲಕ ಜನರಿಗೆ ಹಲವು ಭರವಸೆಗಳನ್ನು ನೀಡಿದ್ದರು. ಆದರೆ ಈಗ ಅದೇ ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಸರ್ಕಾರಕ್ಕೆ ಕಷ್ಟವಾಗುತ್ತಿದೆ. ವಿಕಲಚೇತನರ ಪಿಂಚಣಿ, ವೃದ್ಧಾಪ್ಯ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳಿಗೆ ಹಣ ತಲುಪುತ್ತಿಲ್ಲ. ಬಡವರಿಗೆ ಮನೆ ನಿರ್ಮಾಣದಂತಹ ಮೂಲಭೂತ ಕಾರ್ಯಕ್ರಮಗಳಿಗೂ ತೊಂದರೆಯಾಗಿದೆ. ಆದರೆ ಸರ್ಕಾರ ಗ್ಯಾರಂಟಿ ಅನುಷ್ಠಾನ ಸಮಿತಿಗಳ ಹೆಸರಿನಲ್ಲಿ ರಾಜಕೀಯ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುವ ಕೆಲಸ ಮಾಡುತ್ತಿದೆ. ಜನರ ತೆರಿಗೆ ಹಣವನ್ನು ರಾಜಕೀಯ ಕಾರ್ಯಕರ್ತರಿಗಾಗಿ ಬಳಸುವುದನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಬರದ ಪರಿಸ್ಥಿತಿ ತೀವ್ರವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ನೆರವಿಗೆ ಧಾವಿಸುವ ಬದಲು ಉಡಾಫೆಯಾಗಿ ವರ್ತಿಸುತ್ತಿದೆ. ಸಿಎಂ ಡಿಕೆ ಶಿವಕುಮಾರ್ ವಿಶೇಷ ಅಧಿವೇಶನ ಕರೆದು ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಸುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ರೈತರಿಗೆ ನೇರ ಪರಿಹಾರ ನೀಡುವ ವಿಚಾರದಲ್ಲಿ ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ ಎಂದು  ಹರಿಹಾಯ್ದರು.Karnataka Financial Crisis BJP Demands by vijayendra

ವಿಶೇಷ ಅಧಿವೇಶನದ ವೇಳೆ  ಸರ್ಕಾರ ರೈತರಿಗೆ ಎಕರೆಗೆ ಕನಿಷ್ಠ 50 ಸಾವಿರ ರೂ.  ಪರಿಹಾರ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಆದರೆ ರಾಜ್ಯ ಸರ್ಕಾರ ರೈತರಿಗೆ ಕೇವಲ ₹2,500 ಪರಿಹಾರ ನೀಡಿ ಕೈತೊಳೆದುಕೊಂಡಿದೆ. ಇದು ರೈತರ ಸಂಕಷ್ಟಕ್ಕೆ ತಕ್ಕ ಪರಿಹಾರವಲ್ಲ. ಬರಗಾಲದಲ್ಲಿ ರೈತರ ಬೆನ್ನಿಗೆ ನಿಲ್ಲಬೇಕಿದ್ದ ಸರ್ಕಾರ ಅವರ ನೋವನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ವಿಜಯೇಂದ್ರ  ಕಿಡಿಕಾರಿದರು.ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಿ jk02_new jk02 new

Key words: B.Y. Vijayendra, urges, CM DK Shivakumar,  state’s, financial situation.

English Summary
Title

Karnataka Financial Crisis: BJP Demands White Paper From CM D.K. Shivakumar

Short Description
Karnataka BJP President B.Y. Vijayendra has demanded that Chief Minister D.K. Shivakumar issue a white paper on the state's financial crisis. Citing a Finance Department warning, Vijayendra claimed Karnataka’s total debt has crossed ₹8 lakh crore, with over ₹4 lakh crore raised through fresh borrowings under Congress rule. He alleged severe fiscal distress, including delays in employee salaries and pension distribution. In response, CM D.K. Shivakumar dismissed the bankruptcy narrative, stating the department's advisory was routine administrative caution. He accused the opposition of politicising checks and balances, assuring that Karnataka will meet its financial commitments responsibly.