ಬೆಂಗಳೂರು,ಅಕ್ಟೋಬರ್,1,2026 (www.justkannad.in) : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಈ ಮಧ್ಯೆ ಜಿಲ್ಲಾಡಳಿತ ವತಿಯಿಂದ ಇಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಯಿತು.
ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ: ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಯ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಡಿಸಿಎಂ ಪರಮೇಶ್ವರ್ ಅವರಿಗೆ ಮೈಸೂರು ದಸರಾ 2026 ರ ಆಹ್ವಾನ ಪತ್ರಿಕೆ ನೀಡಿ ಗೌರವಪೂರ್ವಕವಾಗಿ ಆಹ್ವಾನ ನೀಡಿದರು.
ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಜಿ ಅವರು ಇಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ದಸರಾ 2026 ರ ಆಹ್ವಾನ ಪತ್ರಿಕೆ ನೀಡಿ ಗೌರವಪೂರ್ವಕವಾಗಿ ಆಹ್ವಾನ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ.ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.







