Friday, October 2, 2026

BDA Apartments

Mysore dasara BDA JK_Adv BDA Adv
Home Front Page ಮೈಸೂರು ದಸರಾ: ರಾಜಮನೆತನಕ್ಕೆ ಆಹ್ವಾನ ನೀಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು ದಸರಾ: ರಾಜಮನೆತನಕ್ಕೆ ಆಹ್ವಾನ ನೀಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು ಅಕ್ಟೋಬರ್,2,2026 (www.justkannada.in) ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು  ಮೈಸೂರು ಅರಮನೆಯಲ್ಲಿ ರಾಜವಂಶಸ್ಥೆ ಪ್ರಮೋದ ದೇವಿ ಹಾಗೂ ರಾಜಮನೆತನದ ಕುಟುಂಬದವರು  ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಗೌರವಪೂರ್ವಕವಾಗಿ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದರು.

ನಂತರ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಪ್ರತಿ ಬಾರಿಯಂತೆ ಈ ಬಾರಿಯೂ ಜಿಲ್ಲಾ ಉಸ್ತುವಾರಿ ಸಚಿವರಾಗಿ  ರಾಜಮನೆತನದ ಮಹಾರಾಜರಿಗೆ ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಆಹ್ವಾನ ನೀಡಿದ್ದಾಗಿ ತಿಳಿಸಿದರು.

ರಾಜಮನೆತನದವರು ದಸರಾ ಆಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಅಂಬಾರಿ ಕಟ್ಟುವ ಸಮಯದಲ್ಲಿ ಕಳೆದ ಬಾರಿ ಹೆಚ್ಚಿನ ಜನಸಂದಣಿಯಿಂದ ವಿಳಂಬವಾಗಿದ್ದನ್ನು ನೆನಪಿಸಿ, ಈ ಬಾರಿ ಅಂಬಾರಿ ಕಟ್ಟುವ ಜಾಗದಲ್ಲಿ ಕಡಿಮೆ ಜನರಿಗೆ ಅವಕಾಶ ನೀಡಿ ಸುಸೂತ್ರವಾಗಿ ಕೆಲಸ ನಡೆಯುವಂತೆ ಸೂಕ್ತ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.Mysuru Dasara mysore dasara-royal family mysore dasara royal family

ಇದೇ ಸಂದರ್ಭದಲ್ಲಿ ಶಾಸಕರಾದ ಶ್ರೀವತ್ಸ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಡಾ: ಪುಷ್ಪ ಅಮರನಾಥ್ ಮೈಸೂರು ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯುಬ್ ಖಾನ್,  ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಜಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯುಕೇಶ್ ಕುಮಾರ್, ಮೈಸೂರಿನ ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ,  ಅಪರರ ಜಿಲ್ಲಾಧಿಕಾರಿ ಐಶ್ವರ್ಯ ಆರ್,  ಮೈಸೂರು ಮಹಾನಗರ ಪಾಲಿಕೆ ಕಾರ್ಯ ಪಾಲಕ ಅಭಿಯಂತರರಾದ  ಸಿಂಧು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.Mysuru Dasara jk02_new jk02 new

 

English Summary
Title

Mysuru Dasara 2026: Dr Yathindra Siddaramaiah Invites Royal Family and VVIPs

Short Description
Dr Yathindra Siddaramaiah, the Minister-in-charge of Mysuru, has officially commenced the high-profile invitation drive for the globally renowned Mysuru Dasara 2026. Following strict cultural protocols, the district administration is extending formal invitations to the Mysore Royal Family to ensure seamless coordination for the grand festivities hosted at the iconic Mysore Palace. Additionally, Dr Yathindra personally handed over official Nada Habba invitation cards to Karnataka’s Governor, Chief Minister, and Deputy Chief Minister in Bengaluru. This premier cultural festival is scheduled to take place from October 11 to October 21, 2026.
Keywords
Mysuru Dasara, Minister, Dr. Yathindra Siddaramaiah, extends, invitation, royal family.