ಮೈಸೂರು,ಅಕ್ಟೋಬರ್, 2,2026 (www.justkannada.in): ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅಕ್ಟೋಬರ್ 03(ನಾಳೆ) ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಬೆಳಗ್ಗೆ 11.30 ಗಂಟೆಗೆ ಪಿರಿಯಾಪಟ್ಟಣ ತಾಲ್ಲೂಕಿನ ಹಿಟ್ನೆಹೆಬ್ಬಾಗಿಲು ಸರ್ಕಾರಿ ಪ್ರೌಢ ಶಾಲೆಯ ಕ್ರೀಡಾಂಗಣದ ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ನಂತರ ಜಿಲ್ಲಾಡಳಿತ ವತಿಯಿಂದ ಆಯೋಜಿಸಿರುವ ಪ್ರಜಾಸೇವಾ ಆಂದೋಲನ ಕಾರ್ಯಕ್ರದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನಾ 3.35ಕ್ಕೆ ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಆಯೋಜಿಸಿರುವ ನಾಡಹಬ್ಬ ಮೈಸೂರು ದಸರಾ-2026 ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಲಿದ್ದಾರೆ.
5.30ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
Key words: CM, DK Shivakumar, visit, Mysuru, tomorrow.






