ಬೆಂಗಳೂರು,ಅಕ್ಟೋಬರ್, 3,2026 (www.justkannada.in): ಫಾರ್ಮ್ 6, ಫಾರ್ಮ್ 7 ಎಲ್ಲವೂ ಸಂವಿಧಾನದತ್ತವಾಗಿ ನೀಡಿರುವ ಅರ್ಜಿಗಳು. ಹೀಗಾಗಿ ಫಾರ್ಮ್ 7 ಸಲ್ಲಿಸಿದವರ ವಿರುದ್ಧ ಎಫ್ಐಆರ್ ದಾಖಲಿಸುವುದನ್ನು ನಿಲ್ಲಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಫಾರ್ಮ್ 7 ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗದ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಫಾರ್ಮ್ 7 ನೀಡಿರುವವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧಿಸಬೇಕೆಂದು ಚುನಾವಣಾಧಿಕಾರಿ ಮೇಲೆ ಒತ್ತಡ ಹೇರಿದ್ದಾರೆ. ಇದರಿಂದ ಪೊಲೀಸರು ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಹೇಳಿದಂತೆ ಚುನಾವಣಾ ಆಯೋಗದ ಅಧಿಕಾರಿಗಳು ನಡೆಯಬೇಕು ಎನ್ನುವುದು ಸಂವಿಧಾನ ವಿರೋಧಿ. ಫಾರ್ಮ್ 7 ಮೂಲಕ ಬಾಂಗ್ಲಾ ದೇಶೀಯರ ಮತ ಕೈ ಬಿಟ್ಟು ಹೋಗುತ್ತಿದೆ. ಇದರಿಂದಾಗಿ ಕಾಂಗ್ರೆಸ್ಗೆ ಎಲ್ಲ ಕಡೆ ಸೋಲು ಭಯ ಉಂಟಾಗಿದೆ. ಹೀಗಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಲ್ಲ ಸಚಿವರು ಚುನಾವಣಾ ಆಯೋಗದ ಕಚೇರಿ ಮುಂಭಾಗ ಧರಣಿ ಮಾಡಿದ್ದಾರೆ. ಎಂದು ಟೀಕಿಸಿದರು.
Key words: Stop, filing, FIRs ,against, submitted, Form 7, R. Ashoka, demands.






