ಮೈಸೂರು,ಅಕ್ಟೋಬರ್,5,2026 (www.justkannada.in): ಕಳೆದ 6 ವರ್ಷಗಳ ಕಾಲ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಅಂಬಾರಿ ಹೊತ್ತು ಹೆಜ್ಜೆ ಹಾಕಿದ್ದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ನಿಶಾನೆಯಾಗಿ ಪಾಲ್ಗೊಳ್ಳುತ್ತಿದ್ದಾನೆ.
60 ವರ್ಷ ವಯಸ್ಸಾದ ಹಿನ್ನೆಲೆಯಲ್ಲಿ ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಕ್ಯಾಪ್ಟನ್ ಅಭಿಮನ್ಯುವನ್ನ ನಿಶಾನೆಯಾಗಿ ಬಳಕೆ ಮಾಡಲಾಗುತ್ತಿದ್ದು ಇಂದು ಅಭಿಮನ್ಯು ಅರಮನೆಗೆ ಎಂಟ್ರಿಕೊಟ್ಟಿದ್ದಾನೆ.
ಅರಮನೆ ಆವರಣ ಪ್ರವೇಶಿಸಿದ ಅಭಿಮನ್ಯುವಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ. ಇದು ಅವನ ಕೊನೆಯ ದಸರಾವಾಗಿದೆ. 6 ವರ್ಷಗಳ ಕಾಲ ಚಿನ್ನದ ಅಂಬಾರಿ ಹೊತ್ತು ಜಂಬೂ ಸವಾರಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ್ದ ಅಭಿಮನ್ಯುವಿಗೆ ಗೌರವಯುತ ಬೀಳ್ಕೊಡುಗೆ ನೀಡಲಾಗುತ್ತಿದೆ.
Key words: Mysore dasara, Abhimanyu, Mysore Palace, special puja






