ಮಂಡ್ಯ ಅಕ್ಟೋಬರ್,5,2026 (www.justkannada.in): ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯದ ಮುಂಭಾಗ ಅಕ್ಟೋಬರ್ 11ರಿಂದ ನಡೆಯಬೇಕಿದ್ದ ಕಾವೇರಿ ಆರತಿ ಕಾರ್ಯಕ್ರಮವನ್ನ ಮುಂದೂಡಿಕೆ ಮಾಡಲಾಗಿದೆ.
ಅ.11 ರಂದು ಕೆಆರ್ ಎಸ್ ಜಲಾಶಯ ಮುಂಭಾಗ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಬೇಕಿತ್ತು. ಆದರೆ ಅಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಪೂರ್ವ ನಿಯೋಜಿತ ಕಾರ್ಯಕ್ರಮವಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 11 ರಂದು ನಡೆಯಬೇಕಿದ್ದ ಕಾವೇರಿ ಆರತಿ ಕಾರ್ಯಕ್ರಮ ಮುಂದೂಡಲಾಗಿದೆ.
ಅಕ್ಟೋಬರ್ 18ರಿಂದ 23ರವರೆಗೆ ಕಾವೇರಿ ಆರತಿ ನಡೆಸಲು ಸರ್ಕಾರ ತೀರ್ಮಾನಿಸಿದೆ. ಕಳೆದ ವರ್ಷದಿಂದ ಈ ಕಾರ್ಯಕ್ರಮ ನಡೆಯುತ್ತಿದೆ.
Key words: ‘Kaveri Aarathi, scheduled, begin, Oct 11, postponed






