ನವದೆಹಲಿ, ಅಕ್ಟೋಬರ್,5,2026 (www.justkannada.in): ಇಬ್ಬರು ಚುನಾವಣಾ ಆಯುಕ್ತರ ಒಪ್ಪಿಗೆ ಪಡೆಯದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಒಳಗಾಗಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಧ್ಯಂತರ ಅಮಾನತಿಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಎಸ್ ಐಆರ್ ಗೆ ಸಂಬಂಧಿಸಿದ ನಿರ್ಧಾರಗಳನ್ನು ಮುಖ್ಯ ಚುನಾವಣಾ ಆಯುಕ್ತರು ಇತರ ಇಬ್ಬರು ಚುನಾವಣಾ ಆಯುಕ್ತರ ಒಪ್ಪಿಗೆ ಇಲ್ಲದೆ ತೆಗೆದುಕೊಂಡಿದ್ದಾರೆ ಎಂಬ ಆರೋಪದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ಪೀಠವು, ಯಾವುದೇ ಮಧ್ಯಂತರ ಅಮಾನತು ಆದೇಶ ಹೊರಡಿಸಲು ನಿರಾಕರಿಸಿದ್ದು, ಆರೋಪಗಳ ಕುರಿತು ವಿವರಣೆ ನೀಡುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಚುನಾವಣಾ ಆಯೋಗವು ನೋಟಿಸ್‌ಗೆ ಉತ್ತರಿಸಿದ ಬಳಿಕ, ಅಗತ್ಯವಿರುವ ಸರ್ವಾನುಮತವಿಲ್ಲದೆ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂಬುದು ದೃಢಪಟ್ಟರೆ ಅಂತಹ ಆದೇಶಗಳನ್ನು ಮರುಪರಿಶೀಲಿಸಲಾಗುವುದು ಅಥವಾ ರದ್ದುಗೊಳಿಸಲಾಗುವುದು ಎಂದು ಪೀಠ ತಿಳಿಸಿದೆ. ಸಿಇಸಿಯನ್ನು ಅಮಾನತು ಮಾಡುವಂತೆ ಅಥವಾ ಅವರ ಕಾರ್ಯ ನಿರ್ವಹಣೆಗೆ ತಕ್ಷಣ ತಡೆ ನೀಡುವಂತೆ ಯಾವುದೇ ಮಧ್ಯಂತರ ಆದೇಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
Key words: Supreme Court, refuses, suspend, Gyanesh Kumar, notice, Election Commission.






