Sunday, August 23, 2026

BDA Apartments

Home Front Page ಇಂದು ಮಧ್ಯಾಹ್ನ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸುದ್ದಿಗೋಷ್ಠಿ

ಇಂದು ಮಧ್ಯಾಹ್ನ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸುದ್ದಿಗೋಷ್ಠಿ

ನವದೆಹಲಿ, ನವೆಂಬರ್ 09, 2019 (www.justkannada.in): ಅಯೋಧ್ಯಾ ಭೂ ವಿವಾದದ ಕುರಿತ ತೀರ್ಪು ಪ್ರಕಟವಾದ ಬಳಿಕ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ.

ತೀರ್ಪಿನ ಹಿನ್ನೆಲೆಯಲ್ಲಿ ಅವರ ಪ್ರತಿಕ್ರಿಯೆ ಮತ್ತು ಆರೆಸ್ಸೆಸ್ ನಡೆ ಏನಿರಲಿದೆ ಎಂಬ ಕುತೂಹಲ ಮೂಡಿಸಿದೆ.

ತೀರ್ಪು ಪ್ರಕಟವಾದ ಬಳಿಕ ದೆಹಲಿಯ ಝಾಂಡೆವಾಲನ್‌ನಲ್ಲಿನ ಕೇಶವ್ ಕುಂಜ್ ಪರಿಸರ್‌ನಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಸಂಘದ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ.