Monday, October 5, 2026

BDA Apartments

ಪ್ರಧಾನಿ ಮೋದಿ ಭೇಟಿಯಾಗಿ BDA JK_Adv BDA Adv
Home Front Page ಫಾರ್ಮ್​-7 ದುರ್ಬಳಕೆ: ಸ್ಪಷ್ಟನೆ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್

ಫಾರ್ಮ್​-7 ದುರ್ಬಳಕೆ: ಸ್ಪಷ್ಟನೆ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್

ಬೆಂಗಳೂರು, ಅಕ್ಟೋಬರ್,​​ 5,2026 (www.justkannada.in):  ರಾಜ್ಯದಲ್ಲಿ ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.

ಈ ಸಂಬಂಧ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್, ‘ಒಂದು ದಿನಕ್ಕೆ 10 ಫಾರ್ಮ್ ಕೊಡಬಹುದು. ಬಿಎಲ್​ಎಗಳು ಒಟ್ಟು 50 ಫಾರ್ಮ್ ಕೊಡಬಹುದು. ಇದಕ್ಕೂ ಮೀರಿ ಫಾರ್ಮ್ ಬಂದರೆ ಇಆರ್​ಒ ನಿರ್ಧಾರ ಮಾಡುತ್ತಾರೆ. ಅದಕ್ಕಿಂತ ಹೆಚ್ಚು ಫಾರ್ಮ್ ಕೊಟ್ಟರೇ ಅಥವಾ ಉದ್ದೇಶ ಪೂರ್ವಕವಾಗಿ ತಪ್ಪು ಮಾಡಿದರೆ ಕ್ರಮ ಕೈಗೊಳ್ಳಬಹುದು. ಆದರೆ ಫಾರ್ಮ್-7 ಸಂಬಂಧ ಈವರೆಗೆ ಯಾವುದೇ ಕೇಸ್​ ದಾಖಲಾಗಿಲ್ಲ, ಮತದಾರರ ಪಟ್ಟಿಯಿಂದ ಕೈಬಿಡಬೇಕೆಂದರೆ ಮೊದಲಿಗೆ ನೋಟಿಸ್ ನೀಡಲಾಗುತ್ತದೆ. ಬಳಿಕ ವಿಚಾರಣೆ ನಡೆಸಿದ ನಂತರ ಪಟ್ಟಿಯಿಂದ ಕೈಬಿಡಲಾಗುವುದು ಎಂದು ತಿಳಿಸಿದರು.Misuse anbukuar

ಅರ್ಹರನ್ನು ಮತ್ತೊಮ್ಮೆ ಮತದಾರರ ಪಟ್ಟಿಗೆ ಸೇರ್ಪಡೆ ಮಾಡುತ್ತೇವೆ

ಅರ್ಹರನ್ನು ಮತ್ತೊಮ್ಮೆ ಮತದಾರರ ಪಟ್ಟಿಗೆ ಸೇರ್ಪಡೆ ಮಾಡುತ್ತೇವೆ. ಈ ಬಗ್ಗೆ ವಿಶೇಷ ಜಾಗೃತಿ ಅಭಿಯಾನ ಮಾಡುತ್ತೇವೆ. ಅರ್ಹ ಮತದಾರರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲ್ಲ. ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸುವ ಕೆಲಸ ಆರಂಭವಾಗಲಿದೆ. ಫಾರ್ಮ್​ ನಂಬರ್ 6ನಲ್ಲಿ ಅಪ್ಲಿಕೇಶನ್ ಹಾಕಬಹುದು’ ಎಂದು ಅನ್ಬುಕುಮಾರ್ ತಿಳಿಸಿದರು.Misuse jk02_new jk02 new

 

English Summary
Title

Form 7 Misuse: Karnataka CEO V Anbukumar Clarifies Voter Deletion Rules

Short Description
Karnataka Chief Electoral Officer (CEO) V. Anbukumar has clarified that no voter has been deleted from the electoral roll solely based on Form 7 objections. Addressing concerns over the potential misuse of Form 7 applications during the voter list revision, he stated that strict physical verification, official notices, and formal hearings are mandatory before any name is removed. Following allegations of fraudulent bulk filings, the CEO directed Electoral Registration Officers (EROs) to prosecute anyone submitting false declarations under Section 31 of the Representation of the People Act.
Keywords
Misuse, Form-7, State Chief Electoral Officer, Anbukumar, clarification.